ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯ: ಸಂವಿಧಾನದ ಸದೃಢ ಅನುಷ್ಠಾನ ಅಗತ್ಯ

ಸಂವಿಧಾನ ಸಂಭ್ರಮ ವಿಚಾರ ಸಂಕಿರಣ ಉದ್ಘಾಟಿಸಿದ ಸಚಿವ ನಾರಾಯಣ ಸ್ವಾಮಿ
Last Updated 28 ನವೆಂಬರ್ 2021, 5:25 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಭಾರತದ ಸಂವಿಧಾನ ವೈಶಿಷ್ಟ್ಯ ಹೊಂದಿದೆ. ಸಂವಿಧಾನ ಸರಿಯಾಗಿ ಇನ್ನಷ್ಟು ಸದೃಢವಾಗಿ ಅನುಷ್ಠಾನವಾಗಬೇಕಿದೆ ಎಂದು ಕೇಂದ್ರ ಸರ್ಕಾರದ ಸಾಮಾಜಿಕ ಮತ್ತು ಸಬಲೀಕರಣ ರಾಜ್ಯ ಖಾತೆ ಸಚಿವ ಎ.ನಾರಾಯಣ ಸ್ವಾಮಿ ಹೇಳಿದರು.

ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಶನಿವಾರ ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ವಿಚಾರ ಸಂಕಿರಣ ‘ಸಂವಿಧಾನ ಸಂಭ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಡಾ. ಬಿ.ಆರ್. ಅಂಬೇಡ್ಕರ್ ಅವರಸಂವಿಧಾನದ ಕೊಡುಗೆ ರಾಷ್ಟ್ರವನ್ನು ಒಗ್ಗೂಡಿಸಿದೆ. ಸಾಮಾಜಿಕ ಅಸಮಾನತೆ ನಿವಾರಿಸಲು ಸಂವಿಧಾನವನ್ನು ಯಥಾ ಪ್ರಕಾರ ಅನುಸರಿಸುವುದು ಮುಖ್ಯ ಎಂದರು. ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರನ್ನು ಸಚಿವ ಎಸ್.ಅಂಗಾರ ಸನ್ಮಾನಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಳದ ನೌಕರರಿಗೆ 6ನೇ ವೇತನ ಜಾರಿಯಾಗುವಂತೆ ಮಾಡಿದ ಸಚಿವ ಎಸ್.ಅಂಗಾರ ಅವರನ್ನು ಸಿಬ್ಬಂದಿ ಪರವಾಗಿ ಸಚಿವ ಎ.ನಾರಾಯಣ ಸ್ವಾಮಿ ಸನ್ಮಾನಿಸಿದರು.

‌ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಪ್ರಮುಖರಾದ ಹರೀಶ್ ಕಂಜಿಪಿಲಿ, ಯತೀಶ್ ಅವ್ರಾರ, ಎಸ್ಎಸ್‌ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್ ನಾಯಕ್, ಉಪನ್ಯಾಸಕರಾದ ಆರತಿ ಮತ್ತು ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT