ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಮರುನೋಟ ಅಗತ್ಯ: ಡಾ.ಎನ್.ವಿನಯ ಹೆಗ್ಡೆ

ಆಳ್ವಾಸ್‌ ಗಣರಾಜ್ಯೋತ್ಸವದಲ್ಲಿ 25ಸಾವಿರ ಮಂದಿ ಭಾಗಿ
Last Updated 27 ಜನವರಿ 2023, 5:33 IST
ಅಕ್ಷರ ಗಾತ್ರ

ಮೂಡುಬಿದಿರೆ: ‘ಅಮೆರಿಕದ ಸಂವಿಧಾನಕ್ಕೆ ಅಲ್ಲಿನ ನ್ಯಾಯಾಂಗದ ಸಮ್ಮತಿ ಪಡೆಯದೆ ತಿದ್ದುಪಡಿ ಸಾಧ್ಯವಿಲ್ಲ. ಆದರೆ, ಭಾರತದ ಸಂವಿಧಾನ ತಿದ್ದುಪಡಿಗೆ ಶಾಸಕಾಂಗದ ಸರಳ ಬಹುಮತ ಸಾಕಾಗುತ್ತದೆ. ಇಂತಹ ಅನೇಕ ತಿದ್ದುಪಡಿಗಳು ರಾಜಕೀಯ ಪಕ್ಷಗಳ ಉದ್ದೇಶ ಈಡೇರಿಕೆಗಾಗಿ ನಡೆಯುತ್ತಿವೆ. ಹೀಗಾಗಿ, ಅತ್ಯುತ್ತಮ ಸಂವಿಧಾನವೊಂದಕ್ಕೆ ಪದೇ ಪದೇ ತಿದ್ದುಪಡಿ ಬೇಕಾಗಿದೆಯೇ’ ಎಂದು ನಿಟ್ಟೆ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎನ್. ವಿನಯ ಹೆಗ್ಡೆ ಪ್ರಶ್ನಿಸಿದರು.

ಗುರುವಾರ 74ನೇ ಗಣರಾಜ್ಯೊತ್ಸವ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

110ಕ್ಕೂ ಅಧಿಕ ಮಾಜಿ ಯೋಧರು ಪಾಲ್ಗೊಂಡಿದ್ದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಘಟಕದ 70ಕ್ಕೂ ಅಧಿಕ ಪದಾಧಿಕಾರಿಗಳು ಇದ್ದರು. ಎರಡು ದಿನಗಳ ನಾಯಕತ್ವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸುಮಾರು 1,700 ಕ್ಕೂ ಅಧಿಕ ಎನ್‌ಸಿಸಿ ಹಾಗೂ ಎನ್ಎಸ್ಎಸ್ ಕೆಡೆಟ್‌ಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ರೋವರ್ಸ್ಸ್‌ ಮತ್ತು ರೇಂಜರ್ಸ್ಸ್ ಹಾಗೂ ಯೂತ್ ರೆಡ್‌ಕ್ರಾಸ್ ವಿದ್ಯಾರ್ಥಿಗಳು ಮೆರುಗು ಹೆಚ್ಚಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಟ್ರಸ್ಟಿ ಡಾ.ವಿನಯ ಆಳ್ವ, ಉದ್ಯಮಿ ಶ್ರೀಪತಿ ಭಟ್, ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮಾಜಿ ಸಚಿವ ಅಭಯಚಂದ್ರ ಜೈನ್ ಇದ್ದರು. ಉಪನ್ಯಾಸಕರಾದ ವೇಣುಗೋಪಾಲ ಶೆಟ್ಟಿ ಹಾಗೂ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT