ಶುಕ್ರವಾರ, ಅಕ್ಟೋಬರ್ 22, 2021
22 °C

ಹಿಂದೂಗಳ ವಿಚಾರಕ್ಕೆ ಬಂದ್ರೆ ಗಾಂಧಿಯನ್ನೇ ಬಿಟ್ಟಿಲ್ಲ ನಾವು: ಮಹಾಸಭಾದ ಧರ್ಮೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ‘ಹಿಂದೂ ವಿರೋಧಿ ವಿಚಾರ ಬಂದಾಗ ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ. ನೀವು ಯಾವ ಲೆಕ್ಕ? ಹಿಂದೂಗಳ ಮೇಲೆ ನಡೆದ ದಾಳಿಯನ್ನು ಖಂಡಿಸಿ, ಗಾಂಧಿ ಹತ್ಯೆ ಮಾಡಲಿಕ್ಕಾಗುತ್ತದೆ ಎಂದಾದರೆ, ನಿಮ್ಮ ವಿಚಾರದಲ್ಲಿ ನಾವು ಆಲೋಚನೆ ಮಾಡಲು ಸಾಧ್ಯವಿಲ್ಲ ಎನ್ನುತ್ತೀರಾ’ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನೇ ಗುರಿಯಾಗಿಟ್ಟು, ಧ್ವಂಸ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ ಇದೆಯೇ ?‘ ಎಂದು ಪ್ರಶ್ನಿಸಿದರು.

‘ತಾಲಿಬಾನ್‌ಗಿಂತ ಕೀಳುಮಟ್ಟದ ಆಡಳಿತವನ್ನು ಬಿಜೆಪಿ ಸರ್ಕಾರ ನಡೆಸುತ್ತಿದೆ. ಬಿಜೆಪಿ ಬೆನ್ನುಮೂಳೆ ಇಲ್ಲದ ಪಕ್ಷವಾಗಿದೆ. ದೇಗುಲ ಧ್ವಂಸ ಪ್ರಕರಣದಲ್ಲಿ ಅಧಿಕಾರಿಗಳು ಮಾತ್ರವಲ್ಲ, ರಾಜಕೀಯ ಮುಖಂಡರ ತಲೆದಂಡವೂ ಆಗಬೇಕು’ ಎಂದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು