ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡಿನಲ್ಲಿ ಮತ್ತೊಬ್ಬರಿಗೆ ಕೋವಿಡ್‌

ಸೋಂಕಿನ ಶಂಕೆಯಲ್ಲಿ 127 ಮಂದಿ ಆಸ್ಪತ್ರೆಗೆ ದಾಖಲು
Last Updated 28 ಮಾರ್ಚ್ 2020, 16:20 IST
ಅಕ್ಷರ ಗಾತ್ರ

ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ‘ಕೋವಿಡ್‌–19’ ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಅಲ್ಲಿ ಕೋವಿಡ್‌ ಪಿಡಿತರ ಸಂಖ್ಯೆ 82ಕ್ಕೇರಿದೆ.

ಮಾರ್ಚ್‌ ಎರಡನೇ ವಾರದಿಂದ ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದೆ. 34 ಮಂದಿಯಲ್ಲಿ ಸೋಂಕು ಇರುವುದು ಶುಕ್ರವಾರ ಒಂದೇ ದಿನ ದೃಢಪಟ್ಟಿತ್ತು. ಕೇರಳದಲ್ಲಿ ಒಟ್ಟು 165 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ. ಅರ್ಧದಷ್ಟು ಮಂದಿ ಕಾಸರಗೋಡು ಜಿಲ್ಲೆಯವರೇ ಆಗಿದ್ದಾರೆ.

ಮಾರ್ಚ್‌ 16ರಂದು ಕಾಸರಗೋಡು ಜಿಲ್ಲೆಯಲ್ಲಿ ಮೊದಲ ಕೋವಿಡ್‌–19 ಪ್ರಕರಣ ದೃಢಪಟ್ಟಿತ್ತು. ಮಾರ್ಚ್‌ 20ರಿಂದ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದೆ. 19 ಮಂದಿಯಲ್ಲಿ ಸೋಂಕು ಇರುವುದು ಮಾರ್ಚ್‌ 23ರಂದು ಖಚಿತವಾಗಿತ್ತು. ಆ ಬಳಿಕ ಮತ್ತಷ್ಟು ಜನರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಕೇರಳ ರಾಜ್ಯದಲ್ಲಿ 6 ಮಂದಿಯಲ್ಲಿ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ಈ ಪೈಕಿ ಒಬ್ಬ ವ್ಯಕ್ತಿ ಕಾಸರಗೋಡಿನವರು ಎಂದು ಕೇರಳ ಆರೋಗ್ಯ ಇಲಾಖೆ ಪ್ರಕಟಿಸಿದೆ.

ಕಾಸರಗೋಡು ಜಿಲ್ಲೆಯಲ್ಲಿ 6,511 ಮಂದಿಯ ಮೇಲೆ ನಿಗಾ ಇರಿಸಲಾಗಿದೆ. 6,384 ಜನರನ್ನು ಗೃಹ ಪರಿವೀಕ್ಷಣೆಯಲ್ಲಿ ಇಡಲಾಗಿದೆ. ಕೋವಿಡ್‌–19 ತಗುಲಿರುವ ಶಂಕೆ ಇರುವ 127 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 27 ಜನರನ್ನು ಶನಿವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಎಲ್ಲರನ್ನೂ ಐಸೊಲೇಷನ್‌ ವಾರ್ಡ್‌ನಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT