ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 168 ಜನರಿಗೆ ಸೋಂಕು

Last Updated 7 ಆಗಸ್ಟ್ 2020, 15:28 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯ 168 ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

‘ಕಾಸರಗೋಡು ನಗರಸಭೆ ವ್ಯಾಪ್ತಿಯ 31, ಉದುಮ ಗ್ರಾಮ ಪಂಚಾಯಿತಿ ವ್ಯಾಪ್ತಿಯ 33, ಪಳ್ಳಿಕ್ಕರದ 34, ಚೆಮ್ನಾಡ್‌ನ 21 ಮತ್ತು ತ್ರಿಕ್ಕರಿಪುರದ 17 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 164 ಮಂದಿಗೆ ಸೋಂಕಿತರ ಸಂಪರ್ಕದಿಂದ ಕೋವಿಡ್‌ ತಗುಲಿದೆ. ನಾಲ್ವರು ವಿದೇಶಗಳಿಂದ ಹಿಂದಿರುಗಿದ್ದವರು’ ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್‌ ಬಾಬು ತಿಳಿಸಿದ್ದಾರೆ.

123 ಜನರು ಕೋವಿಡ್‌ ಸೋಂಕಿನಿಂದ ಗುಣಮುಖರಾಗಿರುವುದು ಶುಕ್ರವಾರ ದೃಢಪಟ್ಟಿದ್ದು, ಕಾಸರಗೋಡು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಈಗ 1,017 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ 35 ಜನರು ಕಣ್ಣೂರು ಆಸ್ಪತ್ರೆಗಳಲ್ಲಿ, ಏಳು ಮಂದಿ ಕೋಯಿಕ್ಕೋಡ್‌ ಆಸ್ಪತ್ರೆಗಳಲ್ಲಿ ಮತ್ತು ಒಬ್ಬರು ಮಲಪ್ಪುರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ಕಾಸರಗೋಡು ಜಿಲ್ಲಾಡಳಿತವು 4,422 ಜನರ ಮೇಲೆ ನಿಗಾ ಮುಂದುವರಿಸಿದೆ. ಈ ಪೈಕಿ 3,469 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದು, 953 ಜನರನ್ನು ಆಸ್ಪತ್ರೆಗಳಲ್ಲಿ ಐಸೋಲೇಷನ್‌ ವಾರ್ಡ್‌ಗಳಿಗೆ ದಾಖಲಿಸಲಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT