ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಬಳಲುತ್ತಿದ್ದ ಶಿರ್ತಾಡಿಯ ಶಿಕ್ಷಕಿ ಪದ್ಮಾಕ್ಷಿ ಸಾವು

Last Updated 16 ಅಕ್ಟೋಬರ್ 2020, 5:45 IST
ಅಕ್ಷರ ಗಾತ್ರ
ADVERTISEMENT
"ಶಿಕ್ಷಕಿ ಪದ್ಮಾಕ್ಷಿ"

ಮಂಗಳೂರು: ಕೋವಿಡ್‌ನಿಂದ ಬಳಲುತ್ತಿದ್ದ ಮೂಡುಬಿದಿರೆ ಸಮೀಪದ ಶಿರ್ತಾಡಿಯ ಮಕ್ಕಿಯ ಜವಾಹರ್ ನೆಹರೂ ಹೈಸ್ಕೂಲ್‌ನ ಶಿಕ್ಷಕಿ ಪದ್ಮಾಕ್ಷಿ ಶುಕ್ರವಾರ ಮುಂಜಾನೆ ಅಸುನೀಗಿದ್ದಾರೆ.

ಕೆಲದಿನಗಳ ಹಿಂದೆ ಅವರ ಪತಿ, ಮೂಡುಬಿದಿರೆಯ ಡಿ.ಜೆ. ಹೈಯರ್ ಪ್ರೈಮರಿ ಶಾಲೆ ಮುಖ್ಯ ಶಿಕ್ಷಕರಾಗಿರುವ ಶಶಿಕಾಂತ್ ಮತ್ತು ಪತ್ನಿ ಪದ್ಮಾಕ್ಷಿಯವರಿಗೆ ಕೊರೊನಾ ಸೋಂಕು ತಗುಲಿದ್ದು, ಶಶಿಕಾಂತ್ ಚೇತರಿಸಿಕೊಂಡಿದ್ದರು. ಆದರೆ ಪದ್ಮಾಕ್ಷಿಯವರ ಆರೋಗ್ಯ ಹದಗೆಟ್ಟಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು.

ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆಯಲ್ಲಿ ಪಾಲ್ಗೊಂಡ ಬಳಿಕ ಕೋವಿಡ್-19 ಸೋಂಕಿಗೊಳಗಾಗಿದ್ದ ತಾಯಿಯನ್ನು ಉಳಿಸಿಕೊಡಿ ಎಂದು ಅವರ ಪುತ್ರಿ ಐಶ್ವರ್ಯಾ ಜೈನ್ ಸರ್ಕಾರಕ್ಕೆ, ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರು. ತಕ್ಷಣ ಮುಖ್ಯಮಂತ್ರಿ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮತ್ತಿತರರು ಸ್ಪಂದಿಸಿ, ಸೂಕ್ತ ಚಿಕಿತ್ಸೆಗೆ ಏರ್ಪಾಡು ಮಾಡಿದ್ದರು. ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದ್ದರು.


ಶಿಕ್ಷಕಿ ಪದ್ಮಾಕ್ಷಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT