ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: 32 ಮಂದಿಯಲ್ಲಿ ಸೋಂಕು ಪತ್ತೆ

ಉಳ್ಳಾಲದ ಕೋಟೆಪುರದ ಮಹಿಳೆ ಕೋವಿಡ್‌-19ನಿಂದ ಸಾವು
Last Updated 29 ಜೂನ್ 2020, 16:39 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 32 ಮಂದಿಗೆ ಕೋವಿಡ್‌–19 ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 265ಕ್ಕೆ ತಲುಪಿದೆ.

‘458 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳ ಪರೀಕ್ಷಾ ವರದಿ ಸೋಮವಾರ ಬಂದಿದೆ. 32 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 426 ಮಾದರಿಗಳ ವರದಿಗಳು ನೆಗೆಟಿವ್‌ ಆಗಿವೆ. ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳ ಹತ್ತು ಜನರು ಸೇರಿದಂತೆ ಜಿಲ್ಲೆಯಲ್ಲಿ ಪತ್ತೆಯಾದ ಕೋವಿಡ್‌–19 ಸೋಂಕು ಪ್ರಕರಣ ಸಂಖ್ಯೆ 705ಕ್ಕೆ ಏರಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದ್ದಾರೆ.

ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಿಂದ 10 ಮಂದಿಗೆ ಕೋವಿಡ್‌ ಸೋಂಕು ತಗುಲಿದೆ. ಶೀತ ಜ್ವರದಿಂದ ಬಳಲುತ್ತಿದ್ದ (ಐಎಲ್‌ಐ) 9 ಜನರು ಮತ್ತು ಉಸಿರಾಟದ ತೀವ್ರ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರು ಜನರು ಕೋವಿಡ್‌ ಸೋಂಕಿತರಾಗಿರುವುದು ದೃಢಪಟ್ಟಿದೆ. ಐವರು ಸೋಂಕಿತರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸೋಂಕು ಪತ್ತೆಯಾದವರಲ್ಲಿ 13 ಮಂದಿ ಕ್ವಾರಂಟೈನ್‌ನಲ್ಲಿ ಇದ್ದವರು. ಇಬ್ಬರು ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ವೇಳೆ ಮಾದರಿ ಸಂಗ್ರಹಿಸಲಾಗಿತ್ತು.

ನಾಲ್ವರು ಗುಣಮುಖ: ಕೋವಿಡ್‌–19 ಸೋಂಕು ಪತ್ತೆಯಾದ ಬಳಿಕ ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದ ನಾಲ್ವರು ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. 32 ವರ್ಷದ ಮಹಿಳೆ ಮತ್ತು 69, 30 ಹಾಗೂ 38 ವರ್ಷದ ಪುರುಷರು ಗುಣಮುಖರಾಗಿದ್ದಾರೆ.

ಅಂತರ ರಾಷ್ಟ್ರೀಯ, ಅಂತರ ರಾಜ್ಯ ಪ್ರಯಾಣದ ಹಿನ್ನೆಲೆ ಇರುವವರು ಸೇರಿದಂತೆ 444 ಜನರ ಆರೋಗ್ಯ ತಪಾಸಣೆಯನ್ನು ಸೋಮವಾರ ನಡೆಸಲಾಗಿದೆ. ಸೋಂಕಿನ ಲಕ್ಷಣಗಳು ಕಂಡುಬಂದಿರುವ 29 ಜನರನ್ನು ನಿಗಾ ಕೇಂದ್ರಗಳಿಗೆ ದಾಖಲು ಮಾಡಲಾಗಿದೆ.

30 ಎಸ್‌ಎಆರ್‌ಐ ಪ್ರಕರಣ: ಉಸಿರಾಟದ ತೀವ್ರ ತೊಂದರೆಯಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ 30 ಪ್ರಕರಣಗಳು ಜಿಲ್ಲೆಯಲ್ಲಿ ಇದುವರೆಗೆ ವರದಿಯಾಗಿವೆ.

ಹೊಸದಾಗಿ 148 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ರವಾನಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸ್ತುತ ಈ ಮಾದರಿಗಳ ಪರೀಕ್ಷಾ ವರದಿಗಳು ಬರುವುದು ಮಾತ್ರ ಬಾಕಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT