ಗುರುವಾರ , ಜೂನ್ 4, 2020
27 °C

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಯಿ–ಮಗನಿಗೆ ಕೋವಿಡ್ ದೃಢ: ಫಸ್ಟ್ ನ್ಯೂರೋ ನಂಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಲ್ಲಿನ ಫಸ್ಟ್ ನ್ಯೂರೋ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಇಬ್ಬರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಫಸ್ಟ್ ನ್ಯೂರೋ ಆಸ್ಪತ್ರೆಯ ಮೂಲದಿಂದ ಸೋಂಕಿತರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ (ರೋಗಿ ಸಂಖ್ಯೆ 507) ಸಂಪರ್ಕದಿಂದ ಇಬ್ಬರಿಗೆ ಸೋಂಕು ಹರಡಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಸಾಣೂರಿನ ತಾಯಿ ಮತ್ತು ಮಗನಿಗೆ ಸೋಂಕು ತಗಲಿದೆ. 50 ವರ್ಷದ ಮಹಿಳೆ(ತಾಯಿ) ಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಫಸ್ಟ್ ನ್ಯೂರೋ ತನಿಖೆಯ ವೇಳೆ ಇವರಿಬ್ಬರ ಮಾಹಿತಿ ಪಡೆದು ಕ್ಯಾರಂಟೈನ್ ಮಾಡಲಾಗಿತ್ತು.

ಸದ್ಯ ತಾಯಿ ಮತ್ತು ಅವರ ಮಗ (26 ವರ್ಷ) ಇಬ್ಬರಿಗೂ ಕೋವಿಡ್-19 ದೃಢವಾಗಿದೆ. ಇವರಿಬ್ಬರಿಗೂ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು