ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ | ಕೊರೊನಾ ಸೋಂಕಿಗೆ ಒಂದೇ ದಿನ ಮೂವರು‌ ಸಾವು: 29ಕ್ಕೆ ಮೃತರ ಸಂಖ್ಯೆ

Last Updated 8 ಜುಲೈ 2020, 5:50 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೋವಿಡ್‌ನಿಂದ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಪುತ್ತೂರಿನ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳದ 60 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.ಈ ಮೂವರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು, ಈ ಪೈಕಿ ಇಬ್ಬರು ಮಹಿಳೆಯರು ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ವ್ಯಾಪಿಸುತ್ತಿದ್ದು, ಮಂಗಳವಾರದವರೆಗೆ 1,359 ಪ್ರಕರಣ ದೃಢಪಟ್ಟಿವೆ. ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT