ಸೋಮವಾರ, ಜೂನ್ 1, 2020
27 °C

ಮಂಗಳೂರು: ಸೀಲ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ ಜಿಲ್ಲಾಡಳಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Mangalore central market

ಮಂಗಳೂರು: ನಗರದಲ್ಲಿ ಸೀಲ್ ಡೌನ್ ಆಗಿದೆ ಎಂಬ ಸುದ್ದಿ  ಕೆಲವು ಮಾಧ್ಯಮಗಳಲ್ಲಿ ಬರುತ್ತಿದೆ. ಇದು ಆಧಾರರಹಿತ ಎಂದು ಜಿಲ್ಲಾಡಳಿತ ಹೇಳಿದೆ. ಜತೆಗೆ, ಮಂಗಳೂರು ನಗರದಲ್ಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ.

ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ.

ಯಾವುದೇ ಸುದ್ದಿಯನ್ನು ಪ್ರಸಾರ ಮಾಡುವ ಮೊದಲು ಸಂಬಂಧಪಟ್ಟವರಿಂದ ದೃಢೀಕರಿಸಲು ಕೋರಲಾಗಿದೆ. ವದಂತಿ, ಅಧಾರ ರಹಿತ ಸುದ್ದಿಗಳ ಪ್ರಸಾರದಿಂದ ಸಾರ್ವಜನಿಕರಲ್ಲಿ ಆತಂಕ, ಗೊಂದಲ ಮೂಡುತ್ತಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು