ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಪಾಲಿಕೆ ಸದಸ್ಯ ಜಗದೀಶ ಶೆಟ್ಟಿ ಆತ್ಮಹತ್ಯೆ ಯತ್ನ

Published 4 ಜನವರಿ 2024, 15:36 IST
Last Updated 4 ಜನವರಿ 2024, 15:36 IST
ಅಕ್ಷರ ಗಾತ್ರ

ಮಂಗಳೂರು: ಪಾಲಿಕೆಯ ಬೋಳೂರು ವಾರ್ಡ್‌ನ ಸದಸ್ಯ ಜಗದೀಶ್ ಶೆಟ್ಟಿ (53) ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಅಂಬೇಡ್ಕರ್ ವೃತ್ತದ ಕೆಎಂಸಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ದೇಹಸ್ಥಿತಿ ಗಂಭೀರವಾಗಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಬಂದರು ಸಮೀಪದ ತಾಜ್‌ ಹೋಟೆಲ್‌ ಬಳಿ ಸಂಜೆ 4 ಗಂಟೆ ಸುಮಾರಿಗೆ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಶಾಸಕ ವೇದವ್ಯಾಸ ಕಾಮತ್‌, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ ಮತ್ತಿತರರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

‘ಜಗದೀಶ್‌ ಶೆಟ್ಟಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಿಳಿದಿಲ್ಲ’ ಎಂದು ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು ’ಪ್ರಜಾವಾಣಿ’ಗೆ ತಿಳಿಸಿದರು.

ಜಗದೀಶ ಶೆಟ್ಟಿ ಅವರು ಬೋಳೂರು ವಾರ್ಡ್‌ನಿಂದ ಅವರು ಮೊದಲ ಸಲ ಪಾಲಿಕೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಪಾಲಿಕೆಯ ಕಲಾಪಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಹಾಡುಗಾರರೂ ಆಗಿರುವ ಅವರು ಅನೇಕ ಕಾರ್ಯಕ್ರಮಗಳಲ್ಲೂ ಹಾಡಿದ್ದಾರೆ. ವಿಶೇಷ ಮಕ್ಕಳ ಬಗ್ಗೆಯೂ ವಿಶೇಷ ಕಾಳಜಿ ವಹಿಸುತ್ತಿದ್ದ ಅವರು ಸಾನಿಧ್ಯ ವಿಶೇಷ ಮಕ್ಕಳ ವಸತಿ ಶಾಲೆಯ ಅಭಿವೃದ್ಧಿಯಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಅದರ ಕಾರ್ಯಕ್ರಮಗಳಲ್ಲೂ ತಪ್ಪದೇ ಭಾಗವಹಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT