ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

Last Updated 2 ಏಪ್ರಿಲ್ 2018, 6:51 IST
ಅಕ್ಷರ ಗಾತ್ರ

ಬೀದರ್: ‘ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಇನ್ನೂ ಅವಕಾಶವಿದೆ ಎಂಬುದು ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ರೂಪಿಸಬೇಕು’ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಎಚ್.ಆರ್. ಮಹಾದೇವ ಸೆಕ್ಟರ್ ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸೆಕ್ಟರ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಏಪ್ರಿಲ್‌ 14 ಕೊನೆಯ ದಿನ. ಈವರೆಗೆ ಹೆಸರು ಸೇರಿಸದೆ ಉಳಿದವರು ಇನ್ನಾದರೂ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುವಂತೆ ಅವರಿಗೆ ಪ್ರೋತ್ಸಾಹಿಸಬೇಕು. ಅಲ್ಲದೇ ಯಾವುದೇ ಆಮಿಷಕ್ಕೊಳಗಾಗದೆ ಮತದಾನ ಮಾಡುವಂತೆ ಅರಿವು ಮೂಡಿಸಬೇಕು. ಜನರನ್ನು ಗುಂಪಾಗಿ ಸೇರಿಸಿ ನಾನು ತಪ್ಪದೇ ಮತದಾನ ಮಾಡುತ್ತೇನೆ ಎನ್ನುವ ಪ್ರತಿಜ್ಞೆಯನ್ನು ಮಾಡಿಸಬೇಕು’ ಎಂದು ತಿಳಿಸಿದರು.

‘ಈಗಾಗಲೇ ತರಬೇತಿ ಪಡೆದುಕೊಂಡಿರುವ ಮತಗಟ್ಟೆ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಆರ್‍ಐಗಳೊಂದಿಗೆ ಸೇರಿ ಜಾಗೃತಿ ಕಾರ್ಯಕ್ರಮ ಏರ್ಪಡಿಸಬೇಕು. ಮಹಿಳೆಯರು, ಯುವಜನರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ವ್ಯವಸ್ಥೆ ಮಾಡಬೇಕು. ಈ ಕಾರ್ಯಕ್ರಮ ಎಲ್ಲ ಹಳ್ಳಿಗಳಲ್ಲೂ ಆಯೋಜಿಸಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್. ಸೆಲ್ವಮಣಿ ಮಾತನಾಡಿ, ’ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾದ ಎಲ್ಲ ಮತಗಟ್ಟೆಗಳು ಸುಸ್ಥಿತಿಯಲ್ಲಿವೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಸೆಕ್ಟರ್ ಅಧಿಕಾರಿಗಳು ಪರಿಶೀಲಿಸಬೇಕು. ವಿದ್ಯುತ್ ಸಂಪರ್ಕ, ಗಾಳಿ, ಬೆಳಕು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯವನ್ನು ಅಲ್ಲಿ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಕಾಲಕಾಲಕ್ಕೆ ಭೇಟಿ ನೀಡಿ ಆ ಬಗ್ಗೆ ವರದಿ ನೀಡಬೇಕು’ ಎಂದು ಸೂಚಿಸಿದರು.ಕೆಲವು ಮತಗಟ್ಟೆಗಳಲ್ಲಿ ಈವರೆಗೂ ಶೌಚಾಲಯ ವ್ಯವಸ್ಥೆ ಮಾಡಿಲ್ಲ, ಮತಗಟ್ಟೆಗಳಿಗೆ ರ‍್ಯಾಂಪ್‌ ವ್ಯವಸ್ಥೆ ಮಾಡಬೇಕಿದೆ’ ಎಂದು ಸೆಕ್ಟರ್ ಅಧಿಕಾರಿಗಳು ಸಭೆಗೆ ತಿಳಿಸಿದರು. ಈ ಬಗ್ಗೆ ಪರಿಶೀಲಿಸಿ ಕೂಡಲೇ ದುರಸ್ತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದರು.ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ, ಚುನಾವಣೆ ತಹಶೀಲ್ದಾರ್‌ ಪಾವನಿ ಕುಲಕರ್ಣಿ ಉಪಸ್ಥಿತರಿದ್ದರು.

ಸ್ವೀಪ್ ಸಮಿತಿ ಸಭೆ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆರ್. ಸೆಲ್ವಮಣಿ ನೇತೃತ್ವದಲ್ಲಿ ಸ್ವೀಪ್ (ಸಿಸ್ಟೆಮೇಟಿಕ್ ವೋಟರ್ಸ್ ಎಜ್ಯುಕೇಶನ್ ಅಂಡ್ ಎಲೆಕ್ಟೋರಲ್ ಪಾರ್ಟಿಸಿಪೇಶನ್) ಸಮಿತಿ ಸಭೆ ನಡೆಯಿತು.ಚುನಾವಣೆ ನ್ಯಾಯ ಸಮ್ಮತವಾಗಿ ನಡೆಸುವ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಮತ್ತಷ್ಟು ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT