ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡದಲ್ಲಿ ತಗ್ಗಿದ ಸೋಂಕಿನ ಪ್ರಮಾಣ

107 ಜನರಿಗೆ ಕೋವಿಡ್–19 ದೃಢ: 398 ಗುಣಮುಖ
Last Updated 20 ಅಕ್ಟೋಬರ್ 2020, 2:50 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ ಕೋವಿಡ್–19 ಪ್ರಮಾಣ ಸ್ವಲ್ಪ ತಗ್ಗಿದೆ. 107 ಜನರಿಗೆ ಕೋವಿಡ್–19 ದೃಢವಾಗಿದ್ದರೆ, 398 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಆರು ಜನರಲ್ಲಿ ಕೋವಿಡ್‌ ಇರುವುದು ಸೋಮವಾರ ಖಚಿತವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 2,26,133 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷಿಸಲಾಗಿದ್ದು, 1,97,712 ಜನರ ವರದಿ ನೆಗೆಟಿವ್‌ ಬಂದಿದೆ. ಒಟ್ಟು 28,421 ಜನರಿಗೆ ಕೋವಿಡ್‌ ದೃಢವಾಗಿದ್ದು, ಒಟ್ಟು 24,686 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 3,098 ಸಕ್ರಿಯ ಪ್ರಕರಣಗಳಿದ್ದು, ವಿವಿಧ ಆಸ್ಪತ್ರೆ, ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರ ಸಂಖ್ಯೆ 637 ಕ್ಕೆ ಏರಿದೆ.

ದಂಡ: ಜಿಲ್ಲೆಯಲ್ಲಿ ಮಾಸ್ಕ್‌್ ನಿಯಮ ಉಲ್ಲಂಘನೆಯ 8,495 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ಒಟ್ಟು ₹9,82,055 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ 120 ಜನರಿಗೆ ಸೋಂಕು:

ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 120 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 203 ಮಂದಿ ಗುಣಮುಖರಾಗಿದ್ದಾರೆ.

107 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ. ವಿದೇಶದಿಂದ ಬಂದ 7, ಹೊರರಾಜ್ಯಗಳಿಂದ ಬಂದ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ಮೃತಪಟ್ಟ ಏಳು ಮಂದಿಗೆ ಕೋವಿಡ್ ಇರುವುದು ಪತ್ತೆಯಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 16,745 ಮಂದಿಗೆ ಸೋಂಕು ದೃಢಪಟ್ಟಿದೆ. 13,478 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT