ಬುಧವಾರ, ಜೂನ್ 16, 2021
22 °C
177 ಜನರಿಗೆ ಕೋವಿಡ್–19 ದೃಢ: 187 ಮಂದಿ ಗುಣಮುಖ

ಮಂಗಳೂರು ತಾಲ್ಲೂಕಿನಲ್ಲೇ ಗರಿಷ್ಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 177 ಮಂದಿಗೆ ಕೋವಿಡ್–19 ದೃಢವಾಗಿದ್ದು, ಈ ಪೈಕಿ ಮಂಗಳೂರು ತಾಲ್ಲೂಕಿನಲ್ಲಿಯೇ ಗರಿಷ್ಠ 107 ಜನರಿಗೆ ಸೋಂಕು ಖಚಿತವಾಗಿದೆ.

88 ಐಎಲ್‌ಐ ಪ್ರಕರಣ, 17 ಎಸ್‌ಎಆರ್‌ಐ ಪ್ರಕರಣ ವರದಿಯಾಗಿವೆ. 29 ಜನರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದ್ದು, 43 ಮಂದಿಯ ಸೋಂಕಿನ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ. ಬಂಟ್ವಾಳ ತಾಲ್ಲೂಕಿನ 14, ಪುತ್ತೂರು ತಾಲ್ಲೂಕಿನ 16, ಸುಳ್ಯ ಹಾಗೂ ಬೆಳ್ತಂಗಡಿ ತಾಲ್ಲೂಕಿನ ತಲಾ 12 ಹಾಗೂ ಇತರ ಜಿಲ್ಲೆಗಳ 16 ಮಂದಿಗೆ ಕೋವಿಡ್–19 ದೃಢವಾಗಿದೆ.

ಸೋಂಕಿತರ ಪೈಕಿ 56 ಪುರುಷರು, 36 ಮಹಿಳೆಯರು ಸೇರಿದಂತೆ 92 ಜನರಲ್ಲಿ ರೋಗ ಲಕ್ಷಣಗಳು ಕಂಡು ಬಂದಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. 52 ಪುರುಷರು ಹಾಗೂ 33 ಮಹಿಳೆಯರು ಸೇರಿದಂತೆ 85 ಜನರಲ್ಲಿ ರೋಗ ಲಕ್ಷಣ ಇಲ್ಲದಾಗಿದ್ದು, ಅವರಿಗೆ ಕೋವಿಡ್ ಕೇರ್‌ ಸೆಂಟರ್‌ ಹಾಗೂ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

187 ಮಂದಿ ಗುಣಮುಖ: ಜಿಲ್ಲೆಯಲ್ಲಿ ಕೋವಿಡ್–19 ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಗುರುವಾರ ಮತ್ತೆ 187 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ಕೇರ್‌ ಸೆಂಟರ್‌ಗಳಲ್ಲಿದ್ದ ಏಳು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35, ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 145 ಮಂದಿಯ ಗಂಟಲು ದ್ರವದ ಮಾದರಿ ವರದಿ ನೆಗೆಟಿವ್‌ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲಾಗಿದೆ. 14 ದಿನಗಳ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

6 ಮಂದಿ ಸಾವು: ಜಿಲ್ಲೆಯಲ್ಲಿ ಮತ್ತೆ ಆರು ಮಂದಿ ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ಗುರುವಾರ ದೃಢವಾಗಿದೆ. ಇದರಿಂದ ಮೃತರ ಸಂಖ್ಯೆ 296ಕ್ಕೆ ಏರಿದೆ. ಮಂಗಳೂರು ತಾಲ್ಲೂಕಿನ ಮೂವರು, ಬಂಟ್ವಾಳದ ಒಬ್ಬರು, ಹೊರಜಿಲ್ಲೆಯ ಇಬ್ಬರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟಿರುವ ಎಲ್ಲರಿಗೂ ಕೋವಿಡ್–19 ಸೋಂಕು ಇರುವುದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.

ರಾಜೇಂದ್ರಕುಮಾರ್‌ಗೆ ಕೋವಿಡ್‌

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಕೋವಿಡ್–19 ದೃಢಪಟ್ಟಿದ್ದು, ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕಿನ ಅಧ್ಯಕ್ಷರಾಗಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿರುವ ರಾಜೇಂದ್ರಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಸಹಕಾರಿಗಳು ಹಾರೈಸಿದ್ದಾರೆ.

ಕಾಸರಗೋಡು: 91 ಮಂದಿಗೆ ಕೋವಿಡ್

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 91 ಜನರಿಗೆ ಕೋವಿಡ್– 19 ದೃಢಪಟ್ಟಿದೆ. ಸಂಪರ್ಕದ ಮೂಲಕ 82 ಜನರಿಗೆ ಸೋಂಕು ತಗುಲಿದೆ. ಈ ‍ಪೈಕಿ ವಿದೇಶದಿಂದ ಬಂದ 7 ಜನರು ಸೇರಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗಳು ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿದ್ದ 154 ಜನರು ಗುರುವಾರ ಗುಣಮುಖರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.