ಮಂಗಳವಾರ, ಜೂನ್ 28, 2022
26 °C
ಕಾರ್ಯಪಡೆ ಸಭೆ

ಕೋವಿಡ್‌ ಮುಕ್ತ ಸಮಾಜಕ್ಕೆ ಶ್ರಮಿಸೋಣ: ಶಾಸಕ ಉಮಾನಾಥ ಕೋಟ್ಯಾನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೂಡುಬಿದಿರೆ: ‘ಹಳ್ಳಿಗಳಲ್ಲಿ ಸಕ್ರಿಯವಾಗಿರುವ ಕೋವಿಡ್ ನಿಯಂತ್ರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡಿ, ಮೂಡುಬಿದಿರೆಯನ್ನು ಕೋವಿಡ್‌ ಮುಕ್ತವನ್ನಾಗಿಸುವಲ್ಲಿ ಎಲ್ಲರೂ ಶ್ರಮಿಸಬೇಕು’ ಎಂದು ಶಾಸಕ ಹಾಗೂ ಮೂಡುಬಿದಿರೆ ತಾಲ್ಲೂಕು ಕಾರ್ಯಪಡೆ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಹೇಳಿದರು.

ಕನ್ನಡ ಭವನದಲ್ಲಿ ಶುಕ್ರವಾರ ನಡೆದ ಕೋವಿಡ್ 19ರ ಕಾರ್ಯಪಡೆ ಸಭೆಯಲ್ಲಿ ಅವರು ಮಾತನಾಡಿದರು. ‘ಹೋಂ ಐಸೊಲೇಷನ್‌ನಲ್ಲಿ ಇರುವವರು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಸ್ಪಷ್ಟ ಮಾಹಿತಿ ಇಟ್ಟುಕೊಳ್ಳಿ. ಅವರು ಪೂರ್ತಿ ಗುಣಮುಖವಾಗುವವರೆಗೆ ನಿಗಾ ಇಡಬೇಕು’ ಎಂದು ಸೂಚಿಸಿದರು.

ಗ್ರಾಮವಾರು ಕೋವಿಡ್ ಸೋಂಕಿತರ ವಿವರಗಳನ್ನು ಶಾಸಕರು ಗ್ರಾಮಲೆಕ್ಕಿಗರ ಮೂಲಕ ಪಡೆದುಕೊಂಡರು. ಸಭೆಗೆ ಬರುವಾಗ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆದ ಅಂಕಿ–ಅಂಶವನ್ನು ನೀಡುವುದರ ಬದಲು ನೀವು ಸಂಗ್ರಹಿಸಿದ ಅಂಕಿ–ಅಂಶವನ್ನು ನೀಡುವಂತೆ ಶಾಸಕರು ಗ್ರಾಮ ಲೆಕ್ಕಿಗರಿಗೆ ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಇಒ ದಯಾವತಿ ಮಾತನಾಡಿ, ‘ಮೂಡುಬಿದಿರೆ ತಾಲ್ಲೂಕಿನಲ್ಲಿ 447 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದರೆ 258 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘18ರಿಂದ 45 ವರ್ಷದೊಳಗಿನವರಿಗೆ ಲಸಿಕೆ ಪಡಕೊಳ್ಳುವ ಬಗ್ಗೆ ಗ್ರಾಮ ಪಂಚಾಯಿತಿಗಳಲ್ಲಿ ಸರಿಯಾದ ಮಾಹಿತಿ ಇಲ್ಲ. ಒಂದು ಡೋಸ್‌ನಿಂದ ಎರಡನೇ ಡೋಸ್ ಪಡೆಕೊಳ್ಳುವ ಮಧ್ಯೆ ಇರಬೇಕಾದ ಅವಧಿಯ ಬಗ್ಗೆಯು ಗೊಂದಲ ಇದೆ’ ಎಂದು ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಶಾಸಕರು, ‘ಇದು ಆರೋಗ್ಯ ಇಲಾಖೆಯ ನಿರ್ದೇಶನದಂತೆ ನಡೆಯುತ್ತದೆ, ಗೊಂದಲ ಬೇಡ’ ಎಂದರು.

ಗ್ರಾಮ ಮಟ್ಟದಲ್ಲಿ ನಡೆಯುವ ಕಾರ್ಯಪಡೆ ಸಭೆಗೆ ಪೊಲೀಸರು ಹಾಜರಾಗುತ್ತಿಲ್ಲ ಎಂಬ ದೂರಿಗೆ ನಮಗೆ ಮಾಹಿತಿ ಇದ್ದರೆ ಸ್ಥಳೀಯ ಬೀಟ್ ಪೊಲೀಸರನ್ನು ಸಭೆಗೆ ಕಳಿಸುತ್ತೇವೆ ಎಂದು ಸಬ್ ಇನ್‌ಸ್ಪೆಕ್ಟರ್ ಸುದೀಪ್ ತಿಳಿಸಿದರು.

ತಹಶೀಲ್ದಾರ್ ಪುಟ್ಟರಾಜು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಶಿಕಲಾ, ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಮುಖ್ಯಾಧಿಕಾರಿ ಇಂದು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು