ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ 12 ನಿರ್ಗತಿಕರು ಸಾವು: ಚಿತಾಭಸ್ಮ ಸಮುದ್ರಕ್ಕೆ ಬಿಟ್ಟ ನಳಿನ್‌

Last Updated 21 ಜೂನ್ 2021, 10:20 IST
ಅಕ್ಷರ ಗಾತ್ರ

ಉಳ್ಳಾಲ: ಕೋವಿಡ್‌–19ನಿಂದ ಮೃತಪಟ್ಟ 12 ನಿರ್ಗತಿಕರಿಗೆ ಮೋಕ್ಷ ಪ್ರಾಪ್ತಿಗಾಗಿ ಜಿಲ್ಲಾಡಳಿತದ ವತಿಯಿಂದ ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನದ ಸಮುದ್ರ ತೀರದಲ್ಲಿ ತಿಲಹೋಮ ನಡೆಯಿತು. ಬಳಿಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಮೃತರ ಚಿತಾಭಸ್ಮವನ್ನು ಸಮುದ್ರಕ್ಕೆ ಬಿಟ್ಟರು.

‘ರಾಜ್ಯದಲ್ಲಿ ಕೋವಿಡ್‌–19ನಿಂದ ಮೃತಪಟ್ಟ ನಿರ್ಗತಿಕರ ಅಂತರಾತ್ಮಗಳಿಗೆ ಮೋಕ್ಷಪ್ರದ ಆಗಬೇಕು. ಅಲ್ಲದೆ, ಕುಟುಂಬದಿಂದ ದೂರವಿದ್ದು ಮೃತಪಟ್ಟವರ ಆತ್ಮಕ್ಕೆ ಸದ್ಗತಿ ಸಿಗುವ ಉದ್ದೇಶದಿಂದ ಚಿತಾಭಸ್ಮವನ್ನು ವಿಸರ್ಜಿಸಲು ಸರ್ಕಾರ ಸೂಚಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೃತಪಟ್ಟ 12 ನಿರ್ಗತಿಕರ ಆತ್ಮಗಳಿಗೆ ಮೋಕ್ಷ ಕಲ್ಪಿಸಲು ಪ್ರಾರ್ಥಿಸಲಾಗಿದೆ’ ಎಂದು ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.

ತಾಲ್ಲೂಕು ಪಂಚಾಉಯಿತಿ ಮಾಜಿ ಸದಸ್ಯ ರವಿಶಂಕರ್ ಸೋಮೇಶ್ವರ ತಿಲ ಹೋಮದಲ್ಲಿ ಕುಳಿತರು. ದಿ. ಮೈಸೂರ್ ಎಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಾಂಗ್ರೆಸ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಸದಾಶಿವ ಉಳ್ಳಾಲ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಬಿಜೆಪಿ ಮುಖಂಡರಾದ ಸತೀಶ್ ಕುಂಪಲ, ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ್ ಉಳ್ಳಾಲ್, ಈಶ್ವರ್ ಕಟೀಲ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್‍ಹೌಸ್, ಕಂದಾಯ ನಿರೀಕ್ಷಕ ಸ್ಟೀಫನ್, ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ, ಗ್ರಾಮಕರಣಿಕ ಲಾವಣ್ಯ, ಹೇಮಂತ್ ಶೆಟ್ಟಿ, ಯಶವಂತ್ ಅಮೀನ್, ಸಚಿನ್ ಮೋರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT