ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 97 ಮಂದಿಗೆ ಕೋವಿಡ್–19 ಸೋಂಕು ತಗಲಿರುವುದು ದೃಢವಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಒಟ್ಟು 1,020 ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 503 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 498 ಸಕ್ರಿಯ ಪ್ರಕರಣಗಳಿದ್ದು, ವೆನ್ಲಾಕ್ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ ದೃಢಪಟ್ಟಿರುವ 97 ಪ್ರಕರಣಗಳ ಪೈಕಿ, 3 ಮಂದಿ ಸೌದಿ ಅರೇಬಿಯಾ ಹಾಗೂ ದುಬೈನಿಂದ ಬಂದವರಾಗಿದ್ದಾರೆ. 25 ಮಂದಿಗೆ ಕೋವಿಡ್–19 ರೋಗಿಗಳ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. 6 ಮಂದಿಯ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ. ಇನ್ನು ಶಸ್ತ್ರಚಿಕಿತ್ಸೆಗೆ ಬಂದ 7 ಮಂದಿಗೂ ಸೋಂಕು ತಗಲಿದ್ದು, ಇವರ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ. 28 ಐಎಲ್ಐ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿವೆ.

ಸೋಂಕಿತರ ಪೈಕಿ ಐದು ಮಕ್ಕಳಿದ್ದಾರೆ. 5 ಮತ್ತು 7 ವರ್ಷದ ಬಾಲಕರು, 1 ವರ್ಷ, 2 ವರ್ಷದ ಹೆಣ್ಣು ಮಕ್ಕಳು, 14 ವರ್ಷದ ಬಾಲಕಿಗೆ ಸೋಂಕು ತಗಲಿದೆ. ಇನ್ನು 74, 70, 69, 68, 66, 65, 64, 63, 62, 60 ವರ್ಷದ ವೃದ್ಧರಿಗೂ ಕೋವಿಡ್–19 ದೃಢವಾಗಿದೆ.

ಮೂವರು ವಾರ್ಡ್ಗೆ ಸ್ಥಳಾಂತರ: ವೆನ್ಲಾಕ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಅವರನ್ನು ವಾರ್ಡ್ಗೆ ಸ್ಥಳಾಂತರಿಸಲಾಗಿದೆ.

ಮಧು ಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಕಾಯಿಲೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ 78 ವರ್ಷದ ವೃದ್ಧ (ರೋಗಿ ಸಂಖ್ಯೆ 8004), ಮಧುಮೇಹ, ಹೃದ್ರೋಗದಿಂದ ಬಳಲುತ್ತಿದ್ದ 52 ವರ್ಷದ ಮಹಿಳೆ (ರೋಗಿ ಸಂಖ್ಯೆ 13310) ಹಾಗೂ ಅಸ್ತಮಾದಿಂದ ಬಳಲುತ್ತಿದ್ದ 38 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ 13299)ಯನ್ನು ಐಸಿಯುನಿಂದ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.

ಲಿವರ್ ಕಾಯಿಲೆ, ಮಧುಮೇಹ, ಹೃದ್ರೋಗ ಹಾಗೂ ನ್ಯುಮೋನಿಯಾದಿಂದ ಬಳುತ್ತಿರುವ 57 ವರ್ಷದ ಮಹಿಳೆ (ರೋಗಿ ಸಂಖ್ಯೆ 9590) ಹಾಗೂ ನ್ಯುಮೋನಿಯಾ ಹಾಗೂ ನರರೋಗಕ್ಕೆ ಸಂಬಂಧಿಸಿದ (ಮೆಟಾಬಾಲಿಕ್ ಎನ್ಸೆಫಲೋಪತಿ) ಕಾಯಿಲೆಯಿಂದ ಬಳಲುತ್ತಿರುವ 50 ವರ್ಷದ ಮಹಿಳೆ (ರೋಗಿ ಸಂಖ್ಯೆ 17089)ಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಹೃದ್ರೋಗ, ನ್ಯುಮೋನಿಯಾದಿಂದ ಬಳುತ್ತಿರುವ 65 ವರ್ಷದ ವೃದ್ಧ (ರೋಗಿ ಸಂಖ್ಯೆ 17076), ಶ್ವಾಸಕೋಶ ಕಾಯಿಲೆ, ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ 75 ವರ್ಷದ ವೃದ್ಧ (ರೋಗಿ ಸಂಖ್ಯೆ 17116)ರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೃದ್ರೋಗ, ನ್ಯುಮೋನಿಯಾದಿಂದ ಬಳಲುತ್ತಿರುವ 52 ವರ್ಷದ ವ್ಯಕ್ತಿ (ರೋಗಿ ಸಂಖ್ಯೆ 17075)ಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

26 ಮಂದಿ ಗುಣಮುಖ

ಕೋವಿಡ್–19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 26 ಮಂದಿ ಶುಕ್ರವಾರ ಗುಣಮುಖರಾಗಿದ್ದಾರೆ.

72, 67, 66, 65, 62 ಹಾಗೂ 60 ವರ್ಷದ ವೃದ್ಧರೂ ಸೇರಿದಂತೆ ಒಟ್ಟು 26 ಮಂದಿಯ ಗಂಟಲು ದ್ರವದ ಮಾದರಿ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 503ಕ್ಕೆ ಏರಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಮತ್ತೊಬ್ಬ ವ್ಯಕ್ತಿ ಸಾವು

ಕೋವಿಡ್–19 ಸೋಂಕು ತಗಲಿದ್ದು ಮತ್ತೊಬ್ಬ ವ್ಯಕ್ತಿ ಗುರುವಾರ ಸಂಜೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಮೃತರ ಸಂಖ್ಯೆ 19ಕ್ಕೆ ಏರಿದೆ.

ಮಡಿಕೇರಿಯ 47 ವರ್ಷದ ವ್ಯಕ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಗುರುವಾರ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಈ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿ ಅಧಿಕ ರಕ್ತದೊತ್ತಡ, ಮಧುಮೇಹ, ಮೇದೋಜಿರಕದ ಉರಿಯೂತ, ಮೂತ್ರಪಿಂಡದ ವೈಫಲ್ಯ, ಅಲ್ಕೋಹಾಲಿಕ್ ಲೀವರ್ ಕಾಯಿಲೆ ಹಾಗೂ ಬಹುಅಂಗಾಂಗ ನಿಷ್ಕ್ರಿಯತೆಯಿಂದ ಬಳಲುತ್ತಿದ್ದರು.

ಈ ವ್ಯಕ್ತಿಯ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೋವಿಡ್–19 ಇರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಕಾಸರಗೋಡು: 7 ಮಂದಿಗೆ ಕೋವಿಡ್

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಏಳು ಜನರಿಗೆ ಕೋವಿಡ್–19 ದೃಢವಾಗಿದೆ. 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 466 ಮಂದಿಗೆ ಕೋವಿಡ್–19 ಸೋಂಕು ದೃಢವಾಗಿದ್ದು, ಈ ಪೈಕಿ 356 ಮಂದಿ ಗುಣಮುಖರಾಗಿದ್ದಾರೆ. 110 ಮಂದಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್–19 ನಿಂದ ಇದುವರೆಗೆ ಕಾಸರಗೋಡು ಜಿಲ್ಲೆಯಲ್ಲಿ ಯಾವುದೇ ಮರಣ ಸಂಭವಿಸಿಲ್ಲ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.