ಗುರುವಾರ , ಜನವರಿ 27, 2022
27 °C

ದ.ಕ: 48 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 48 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದೆ. ಮಂಗಳೂರಿನ ಬಿಜೈಯ ಒಂದೇ ಕುಟುಂಬದ ನಾಲ್ವರಿಗೆ ಕೋವಿಡ್‌ ದೃಢಪಟ್ಟಿದೆ.

ಮೂರು ದಿನಗಳಿಂದ ಜಿಲ್ಲೆಯಲ್ಲಿ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, 15ರಿಂದ 20ರೊಳಗೆ ಇದ್ದ ಸೋಂಕಿನ ಸಂಖ್ಯೆಯು ಈಗ 30ರಿಂದ 48ಕ್ಕೆ ಏರಿಕೆ ಕಂಡಿದೆ. ಸದ್ಯದ ಪಾಸಿಟಿವಿಟಿ ದರ ಶೇ 0.61 ರಷ್ಟಿದೆ. ‘ಎರಡು ದಿನಗಳಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜನರು ಭಯ ಪಡಬೇಕಿಲ್ಲ. ಮಾಸ್ಕ್‌ ಧರಿಸುವುದು ಸೇರಿದಂತೆ ಅಗತ್ಯ ಕ್ರಮ ಅನುಸರಿಸುವುದು ಮುಖ್ಯ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಕಿಶೋರ್‌ ಕುಮಾರ್‌ ತಿಳಿಸಿದರು.

ಓಮೈಕ್ರಾನ್‌ ಸೋಂಕಿನ ಹೊಸ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ, ಸೋಂಕು ತಡೆಗೆ ಅಗತ್ಯ ಕ್ರಮಗಳನ್ನು ಇಲಾಖೆ ಹಾಗೂ ಜಿಲ್ಲಾಡಳಿತ ತೆಗೆದುಕೊಂಡಿದೆ. ಶನಿವಾರ 12 ಮಂದಿ ಗುಣಮುಖರಾಗಿದ್ದು, 187  ಸಕ್ರಿಯ ಪ್ರಕರಣಗಳು ಇವೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.