ಗುರುವಾರ , ಮೇ 28, 2020
27 °C

ದಕ್ಷಿಣ ಕನ್ನಡ: ಮತ್ತಿಬ್ಬರಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲ್ಲೇ ಇದ್ದು, ಭಾನುವಾರ ಮತ್ತೆ ಇಬ್ಬರಿಗೆ ಸೋಂಕು ದೃಢಪಟ್ಟಿದೆ.

ಮಹಾರಾಷ್ಟ್ರದಿಂದ ಬಂದ 35 ವರ್ಷದ ಒಬ್ಬ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, 31 ವರ್ಷದ ಪುರುಷನಿಗೂ ಕೋವಿಡ್ -19 ದೃಢವಾಗಿದೆ.

31 ವರ್ಷದ ಪುರುಷ ಜಪ್ಪಿನಮೊಗರು ನಿವಾಸಿಯಾಗಿದ್ದು ಕೋವಿಡ್ -19 ಶಂಕೆಯಿಂದಾಗಿ ಆಸ್ಪತ್ರೆಗೆ ಬಂದು ಸ್ವಯಂ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಸೋಂಕು ದೃಢವಾಗಿದೆ.

35 ವರ್ಷದ ಮಹಿಳೆ ನಗರದ ಯೆಯ್ಯಾಡಿ ನಿವಾಸಿಯಾಗಿದ್ದು ಇದೇ 14 ರಂದು ಮುಂಬೈನಿಂದ ಬಂದಿದ್ದು, ಆಕೆಯ ಪತಿ ಮತ್ತು ಮಗುವಿನೊಂದಿಗೆ  ಕ್ವಾರಂಟೈನ್‌ನಲ್ಲಿದ್ದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 52ಕ್ಕೆ ಏರಿದ್ದು, ಐವರು ಮಹಿಳೆಯರು ಮೃತಪಟ್ಟಿದ್ದಾರೆ. 31 ಜನರು ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 16 ಮಂದಿ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು