ಗುರುವಾರ , ಜುಲೈ 29, 2021
22 °C

ಸಾವಿರದ ಗಡಿ ದಾಟಿದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಮೃತಪಟ್ಟ 11 ಜನರಲ್ಲಿ ಕೋವಿಡ್ ಸೋಂಕು ಇರುವುದು ಗುರುವಾರ ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ವರ ಸಂಖ್ಯೆ 1009ಕ್ಕೆ ತಲುಪಿದೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ 7.17ರಷ್ಟಿದೆ.

ಉಡುಪಿ: ಜಿಲ್ಲೆಯಲ್ಲಿ 166 ಜನರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ. 316 ಜನರು ಗುಣಮುಖರಾಗಿದ್ದಾರೆ. ಮೂವರು ಮೃತಪಟ್ಟಿದ್ದಾರೆ. 2,406 ಸಕ್ರಿಯ ಪ್ರಕರಣಗಳು ಇವೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 416 ಮಂದಿಗೆ ಕೋವಿಡ್ ದೃಢಪಟ್ಟಿದೆ. 580 ಮಂದಿ ಗುಣಮುಖರಾಗಿದ್ದಾರೆ. 3,549 ಸಕ್ರಿಯ ಪ್ರಕರಣಗಳು ಇವೆ.

ಕಪ್ಪು ಶಿಲೀಂಧ್ರ– 3 ಪ್ರಕರಣ ದಾಖಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 3 ಕಪ್ಪು ಶಿಲೀಂಧ್ರ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಚಿಕ್ಕಮಗಳೂರು, ದಾವಣ ಗೆರೆ, ಶಿವಮೊಗ್ಗದ ತಲಾ ಒಂದು ಪ್ರಕರಣಗಳು ಇವೆ. ಗುರುವಾರ ನಾಲ್ವರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 39 ಸಕ್ರಿಯ ಪ್ರಕರಣಗಳು ಇವೆ. ಜಿಲ್ಲೆಯ ಎಂಟು ಜನರು ಹಾಗೂ ಇತರ ಜಿಲ್ಲೆಗಳ 31 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು