ಸಚಿವ ಅಂಗಾರ ಸಭೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಣೆ ಆರೋಪ

ಕಡಬ: ಇಲ್ಲಿನ ಸರಸ್ವತಿ ವಿದ್ಯಾಲಯದಲ್ಲಿ ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಬಿಜೆಪಿ ಸಭೆ ನಡೆದಿದ್ದು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಆದರೆ, ಅದನ್ನು ಸಚಿವರು ಅಲ್ಲಗಳೆದಿದ್ದು, ‘ಕೋವಿಡ್ ವಿಚಾರವಾಗಿ ತುರ್ತು ಪ್ರಮುಖರ ಸಭೆ ನಡೆಸಲಾಗಿತ್ತು’ ಎಂದು ಹೇಳಿಕೆ ನೀಡಿದ್ದಾರೆ.
ಭಾನುವಾರ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಿ ಬಿಜೆಪಿಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಬ್ಬಿತ್ತು. ಈ ಸಭೆಗೆ ಮಾಧ್ಯಮದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು.
ಸಭೆಗೆ ವರದಿ ಮಾಡಲು ತೆರಳಿದ್ದ ವೆಬ್ಸೈಟ್ ಸಿಬ್ಬಂದಿ ವಿಡಿಯೊ ಮಾಡುತ್ತಿದ್ದಾಗ ಅದಕ್ಕೆ ಕಾರ್ಯಕರ್ತರಿಂದ ಆಕ್ಷೇಪವೂ ವ್ಯಕ್ತವಾಗಿ, ಮಾತಿನ ಚಕಮಕಿಯೂ ನಡೆದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.