ಮಂಗಳೂರು: ‘ನೆರೆಯ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿರುವ ಕಾರಣ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್1 ರಿಂದ ಒಂದು ವಾರ ಸ್ಥಗಿತಗೊಳಿಸಲಾಗುವುದು’ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ. ಮಾತನಾಡಿ, ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಪ್ರಕರಣ ದಾಖಲಿಸಬೇಕು. ಈ ಬಗ್ಗೆ ನಿಗಾ ವಹಿಸಲು ಗೃಹರಕ್ಷಕ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದರು.
ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್‍ನಲ್ಲಿ ಇರುವ ಬಗ್ಗೆ ತಹಶೀಲ್ದಾರ್‌ಗಳು, ತಾಲ್ಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಜನಸಂದಣಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲಿನವರಿಗೆ ಶೇ 60 ರಷ್ಟು ಆನ್‍ಲೈನ್ ನೋಂದಣಿ ಮತ್ತು ಶೇ 40 ನೇರವಾಗಿ, 18 ವರ್ಷ ಮೇಲಿನವರಿಗೆ ಶೇ 80 ರಷ್ಟು ಆನ್‍ಲೈನ್ ನೋಂದಣಿ ಮತ್ತು ಶೇ 20 ನೇರವಾಗಿ ಲಸಿಕೆ ನೀಡಬೇಕು ಎಂದು ತಿಳಿಸಿದರು. ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕುಮಾರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.