ಮಂಗಳೂರು: ಜಿಲ್ಲೆಯಲ್ಲಿ ಮಂಗಳವಾರ 272 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 382 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಏಳು ಮಂದಿಗೆ ಮಂಗಳವಾರ ಕೋವಿಡ್–19 ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಒಟ್ಟು 1,76,185 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, 1,51,356 ಮಂದಿಯ ವರದಿ ನೆಗೆಟಿವ್ ಬಂದಿದೆ. 18,786 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5,462 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 581ಕ್ಕೆ ಏರಿದೆ.

6.58 ಲಕ್ಷ ದಂಡ: ಜಿಲ್ಲೆಯಲ್ಲಿ ಈವರೆಗೆ ಕೋವಿಡ್–19 ನಿಯಮ ಉಲ್ಲಂಘನೆಯ 5,345 ಪ್ರಕರಣ ಪತ್ತೆಯಾಗಿದ್ದು,₹6,58,385 ದಂಡ ವಸೂಲಿ ಮಾಡಲಾಗಿದೆ.

ಸರ್ಕಾರದ ಆದೇಶದಂತೆ ನಿಯಮ ಉಲ್ಲಂಘಿಸಿದಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಿಂದ ದಂಡ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಕಾಸರಗೋಡು– 416 ಮಂದಿಗೆ ಸೋಂಕು:

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 416 ಮಂದಿಗೆ ಕೋವಿಡ್ ದೃಢಪಟ್ಟಿದೆ. 398 ಮಂದಿಗೆ ಸಂಪರ್ಕದಿಂದ ಮೂಲಕ ಸೋಂಕು ತಗಲಿದೆ. 202 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 12,476 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 11,108 ಮಂದಿಗೆ ಸಂಪರ್ಕದಿಂದ ಮೂಲಕ ಸೋಂಕು ತಗಲಿದೆ. ಒಟ್ಟು 8,904 ಮಂದಿ ಗುಣಮುಖರಾಗಿದ್ದಾರೆ. 3678 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.