ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ದ.ಕ.: 149 ಜನರಿಗೆ ಕೋವಿಡ್‌ ಸೋಂಕು
Last Updated 21 ಅಕ್ಟೋಬರ್ 2020, 2:27 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಹೊಸ ಕೋವಿಡ್‌–19 ಪ್ರಕರಣಗಳು ಕಡಿಮೆಯಾಗುತ್ತಿದ್ದು, ಗುಣಮುಖರ ಸಂಖ್ಯೆ ಹೆಚ್ಚಾಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ.

ಮಂಗಳವಾರ ಜಿಲ್ಲೆಯಲ್ಲಿ 146 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಒಟ್ಟು 299 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮೃತಪಟ್ಟ ನಾಲ್ವರಲ್ಲಿ ಕೋವಿಡ್‌–19 ಇರುವುದು ಮಂಗಳವಾರ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,29,948 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 2,01,381 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು 28,567 ಮಂದಿಗೆ ಕೋವಿಡ್ ದೃಢಪಟ್ಟಿದ್ದು, ಈ ಪೈಕಿ 24,985 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,941 ಸಕ್ರಿಯ ಪ್ರಕರಣಗಳಿದ್ದು, ಆಸ್ಪತ್ರೆ, ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 641 ಮಂದಿ ಮೃತಪಟ್ಟಿದ್ದಾರೆ.

₹10 ಲಕ್ಷ ದಂಡ: ಮಾಸ್ಕ್ ನಿಯಮ ಉಲ್ಲಂಘನೆ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ 8,687 ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ ಒಟ್ಟು ₹10 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ 145 ಪ್ರಕರಣ: ಜಿಲ್ಲೆಯಲ್ಲಿ ಮಂಗಳವಾರ 145 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಈ ಪೈಕಿ 141 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 409 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 16,890 ಮಂದಿಗೆ ಸೋಂಕು ತಗಲಿದ್ದು, ಒಟ್ಟು 13,887 ಮಂದಿ ಗುಣಮುಖರಾಗಿದ್ದಾರೆ. ಮೃತರ ಸಂಖ್ಯೆ 162 ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT