ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 101 ಜನರಲ್ಲಿ ಸೋಂಕು

Last Updated 27 ಆಗಸ್ಟ್ 2020, 3:29 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 101 ಜನರಿಗೆ ಕೋವಿಡ್‌ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 90, ವಿದೇಶಗಳಿಂದ ಬಂದ ಒಂಭತ್ತು ಹಾಗೂ ಹೊರ ರಾಜ್ಯಗಳಿಂದ ಬಂದಿರುವ ಇಬ್ಬರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,103ಕ್ಕೆ ತಲುಪಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ. ರಾಮದಾಸ್‌ ತಿಳಿಸಿದ್ದಾರೆ.

ಕಾಸರಗೋಡು ನಗರಸಭೆ ಹಾಗೂ ಉದು ಪಂಚಾಯಿತಿ ವ್ಯಾಪ್ತಿಯ ತಲಾ 15, ಅಜಾನೂರು ಪಂಚಾಯಿತಿ ವ್ಯಾಪ್ತಿಯ 12, ಕುಂಬಳೆ ಪಂಚಾಯಿತಿ ವ್ಯಾಪ್ತಿಯ ಎಂಟು, ಕಾಞಂಗಾಡ್‌ ನಗರಸಭೆ ವ್ಯಾಪ್ತಿಯ ಏಳು, ಚೇಂಗಳ ಪಂಚಾಯಿತಿ ವ್ಯಾಪ್ತಿಯ ಆರು, ಚೆಮ್ನಾಡ್‌ ಪಂಚಾಯಿತಿ ವ್ಯಾಪ್ತಿಯ ಐದು ಜನರಿಗೆ ಕೋವಿಡ್‌ ತಗುಲಿರುವುದು ಬುಧವಾರ ದೃಢಪಟ್ಟಿದೆ.

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ಕಾಸರಗೋಡು ಜಿಲ್ಲೆಯಲ್ಲಿ 5,430 ಜನರ ಮೇಲೆ ನಿಗಾ ಮುಂದುವರಿದಿದೆ. 4,720 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದರೆ, 710 ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಸದಲ್ಲಿರಿಸಿ, ವೈದ್ಯಕೀಯ ನಿಗಾದಲ್ಲಿಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT