ಭಾನುವಾರ, ಜೂಲೈ 12, 2020
28 °C

ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಸೋಂಕಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್‌–19 ಸೋಂಕು ತಗುಲಿರುವ ಉತ್ತರ ಭಾರತದ ಕಾರ್ಮಿಕನೊಬ್ಬ ಚಿಕಿತ್ಸೆಗೆ ಕರೆದೊಯ್ಯುತ್ತಿದ್ದಾಗ ಭಯದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಆತನನ್ನು ಪತ್ತೆಮಾಡಿದ ಅಧಿಕಾರಿಗಳು ಮನವೊಲಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಂಪನಕಟ್ಟೆಯ ನಿರ್ಮಾಣ ಹಂತದ ಕಟ್ಟಡವೊಂದರ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರಾಖಂಡ ರಾಜ್ಯದ ಕೂಲಿ ಕಾರ್ಮಿಕನಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದ್ದವು. ಈತನನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ, ಪರೀಕ್ಷಿಸಿದಾಗ ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿತ್ತು.

ಸೋಮವಾರ ಸಂಜೆ ಆತನನ್ನು ವೆನ್ಲಾಕ್‌ ಕೋವಿಡ್‌ ವಿಶೇಷ ಆಸ್ಪತ್ರೆಗೆ ಕರೆದೊಯ್ಯಲು ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಆಂಬುಲೆನ್ಸ್‌ನೊಂದಿಗೆ ಖಾಸಗಿ ಆಸ್ಪತ್ರೆಗೆ ಹೋಗಿತ್ತು. ತನಗೆ ಕೋವಿಡ್‌ ಸೋಂಕು ಇರುವುದನ್ನು ತಿಳಿದ ರೋಗಿ, ಆಂಬುಲೆನ್ಸ್‌ ಹತ್ತಿಸುತ್ತಿದ್ದಾಗ ತಪ್ಪಿಸಿಕೊಂಡು ಓಡಿಹೋದ.

ಕೆಲ ಹೊತ್ತಿನ ಬಳಿಕ ಆತ ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿ ಇರುವುದು ಗೊತ್ತಾಯಿತು. ಮಂಗಳೂರು ಉತ್ತರ ಠಾಣೆ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿ ಆತನ ಮನವೊಲಿಸಿದರು. ಆಪ್ತ ಸಮಾಲೋಚನೆ ನಡೆಸಿ, ಚಿಕಿತ್ಸೆ ಕುರಿತು ಧೈರ್ಯ ತುಂಬಿದರು. ಬಳಿಕ ಆತನನ್ನು ವೆನ್ಲಾಕ್‌ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು