ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಳ್ಳಾಲ: ಸಿಪಿಎಂ ಮುಖಂಡ ನಿಧನ

Published 13 ಫೆಬ್ರುವರಿ 2024, 15:12 IST
Last Updated 13 ಫೆಬ್ರುವರಿ 2024, 15:12 IST
ಅಕ್ಷರ ಗಾತ್ರ

ಉಳ್ಳಾಲ: ಸಿಪಿಎಂ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ (68) ಹೃದಯಾಘಾತದಿಂದ ಮಂಗಳವಾರ ನಿಧನರಾದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿದ್ದ ಅವರು ವಾಪಸಾಗುವಾಗ ಹೃದಯಾಘಾತ ಉಂಟಾಗಿದೆ.

ಸಿಪಿಎಂ, ದಲಿತ ಹಕ್ಕುಗಳ ಹೋರಾಟ, ಬೀಡಿ ಲೇಬರ್ ಯೂನಿಯನ್, ಕೆಪಿಆರ್‌ಎಸ್ ರೈತ ಸಂಘ, ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ತೊಡಗಿಸಿಕೊಂಡಿದ್ದರು. ತಲಪಾಡಿ ಭಾಗದಲ್ಲಿ ಕೊರಗಜ್ಜನ ಪಾತ್ರಿಯಾಗಿಯೂ ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು. ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT