ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿ: ರಾಜೇಂದ್ರ

Last Updated 10 ಅಕ್ಟೋಬರ್ 2022, 2:47 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಸೌಹಾರ್ದ ಮೂಡಿಸುವುದಕ್ಕೆ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ಮಾದರಿಯಾಗಿದೆ ಎಂದು ಹೇಳಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಒತ್ತಡ ನಿವಾರಣೆಗೆ ಕ್ರೀಡಾ ಚಟುವಟಿಕೆ ಸಹಕಾರಿಯಾಗುತ್ತದೆ ಎಂದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಟೂರ್ನಿಯನ್ನು ನಗರದ ಸೇಂಟ್‌ ಅಲೋಶಿಯಸ್ ಕಾಲೇಜು ಮೈದಾನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾತನಾಡಿ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಖ್ಯಾತಿ ಪಡೆದಿರುವ ಜಿಲ್ಲೆ ಪ್ರವಾಸೋದ್ಯಮದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅವಕಾಶವಿದೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ, ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ರೋಹನ್ ಮೊಂತೆರೊ, ಪತ್ರಕರ್ತರಾದ ಮನೋಹರ ಪ್ರಸಾದ್, ಜಗನ್ನಾಥ ಶೆಟ್ಟಿ ಬಾಳ, ಹರೀಶ್ ರೈ, ಆರಿಫ್ ಪಡುಬಿದ್ರೆ, ಪುಷ್ಪರಾಜ್ ಬಿ.ಎನ್, ಭಾಸ್ಕರ ರೈ ಕಟ್ಟ, ರಾಜೇಶ್ ಪೂಜಾರಿ, ಭರತ್ ರಾಜ್, ರಾಜೇಶ್ ದಡ್ಡಂಗಡಿ ಇದ್ದರು. ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ವಿಜಯ ಕೋಟ್ಯಾನ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT