ಶನಿವಾರ, ಡಿಸೆಂಬರ್ 14, 2019
22 °C

ಆತ್ಮಹತ್ಯೆಗೆ ಪ್ರೇರಣೆ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಪುತ್ತೂರು: ಫೈನಾನ್ಸ್ ಸಾಲ ಸಂದಾಯ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ, ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ನಗರದ ಹೊರವಲಯದ ಪಡೀಲು ನಿವಾಸಿ ರಾಜು ಬಂಧಿತ ಆರೋಪಿ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಕೆಮ್ಮಾಯಿಯಲ್ಲಿರುವ 'ಎಸ್.ವಿ.ಕಿಚನ್ ವೇರ್ಸ್‌' ಪಾತ್ರೆಗಳ ತಯಾರಿಕಾ ಸಂಸ್ಥೆಯಲ್ಲಿ ಪಾತ್ರೆಗಳ ತಯಾರಿಕೆ ಕೆಲಸ ಮಾಡುತ್ತಿದ್ದ ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ನಿವಾಸಿ ವಿಶ್ವನಾಥ (40) ಅವರು ಶನಿವಾರ  ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವಿಶ್ವನಾಥ ಅವರು ಮರಣ ಪತ್ರವೊಂದನ್ನು ಬರೆದಿಟ್ಟಿದ್ದರು.

‘ವಿಶ್ವನಾಥ ಅವರ ಹೆಸರಿನಲ್ಲಿ ರಾಜು ಎಂಬಾತ ಸಾಲ ಪಡೆದಿದ್ದು, ಪದೇ ಪದೇ ಕರೆ ಮಾಡಿ ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದ್ದುದರಿಂದ ಆತ್ಮಹತ್ಯೆ ಮಾಡಿರುವುದಾಗಿ’  ಮೃತರ ಪತ್ನಿ ಸುನಿತಾ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು.

ಪ್ರತಿಕ್ರಿಯಿಸಿ (+)