ಸೋಮವಾರ, ನವೆಂಬರ್ 18, 2019
29 °C

ಕಿರು ಸೇತುವೆಗೆ ಕಾರು ಡಿಕ್ಕಿ: ಸಾವು

Published:
Updated:
Prajavani

ನೆಲ್ಯಾಡಿ(ಉಪ್ಪಿನಂಗಡಿ): ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಗುಂಡ್ಯದಲ್ಲಿ ಗುರುವಾರ ಕಾರು ರಸ್ತೆ ಬದಿಯ ಕಿರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಜಾಲಹಳ್ಳಿ ನಿವಾಸಿ ನಾಗರಾಜ್ (60) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಿವಾಸಿ ಹನುಮಂತ ನಾಯಕ್‌ ಎಂಬುವವರು ಗಾಯಗೊಂಡಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಪುತ್ತೂರು ವಿವೇಕಾನಂದ ಕಾಲೇಜಿಗೆ ಬರುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಿರು ಸೇತುವೆಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
 ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)