ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ; ನಾಲ್ವರ ಬಂಧನ

ಉಳ್ಳಾಲ: ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಉಳ್ಳಾಲ ಪೊಲೀಸರು, ದಂಪತಿ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಷಾದ್ ಅಡ್ಯನಡ್ಕ ಅವರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ ಆರೋಪಿ ಆಗಿದ್ದು, ಈತ ಈ ಹಿಂದೆ ಪಿಲಾರು, ಕಾಪಿಕಾಡ್ ಪ್ರದೇಶಗಳಲ್ಲೂ ಬಾಡಿಗೆ ಮನೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ, ಶಾಸಕರೊಬ್ಬರ ಸಂಬಂಧಿ ಎಂದು ಹೇಳಿಕೊಳ್ಳುತ್ತಿದ್ದ. ಶರ್ಫುದ್ದೀನ್ ಎಂಬಾತ ನೆರವಾಗುತ್ತಿದ್ದ ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು, ನೊಂದ ಯುವತಿಯರನ್ನು ರಕ್ಷಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.