ಮಂಗಳೂರು: ನಗರದ ನಂತೂರಿನ ‘ಮೌಂಟ್ ಟೀಯರಾ‘ ಅಪಾರ್ಟ್‌ಮೆಂಟ್ ಸಮುಚ್ಚಯ ಕಟ್ಟಡದ ಒಂಬತ್ತನೇ ಮಹಡಿಯಿಂದ ಕೆಳಗೆ ಬಿದ್ದು ಎ.ಸಿ. ಟೆಕ್ನಿಷಿಯನ್ ಒಬ್ಬರು ಬುಧವಾರ ಸಂಜೆ ಮೃತಪಟ್ಟಿದ್ದಾರೆ.
‘ಬಂಟ್ವಾಳ ತಾಲ್ಲೂಕಿನ ವಿನಯ್ ಜೋಯಲ್ ತಾವ್ರೊ (22 ವರ್ಷ) ಮೃತರು. ಅವರು ಒಂಬತ್ತನೇ ಮಹಡಿಯ ಕಿಟಕಿಯಿಂದ ಹೊರಬಂದು ಹವಾನಿಯಂತ್ರಕ ಯಂತ್ರಕ್ಕೆ ಸ್ಕ್ರೂ ಅಳವಡಿಸುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಸಂಬಂಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.