ವಿಚಾರಣೆಗ ಹಾಜರಾಗದ ನಾಲ್ವರು
ಪ್ರಕರಣದ ಸಾಕ್ಷಿ ದೂರುದಾರನಿಗೆ ಆಶ್ರಯ ನೀಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ ಹಾಗೂ ಜಯಂತ್ ಟಿ. ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಜಾರಿಗೊಳಿಸಿತ್ತು. ವಿಚಾರಣೆಗೆ ಹಾಜರಾಗಲು ಕಾಲಾವಕಾಶ ಕೋರಿ ವಕೀಲರ ಮೂಲಕ ಮನವಿ ಸಲ್ಲಿಸಿದ್ದ ಈ ನಾಲ್ವರು ಇನ್ನೂ ವಿಚಾರಣೆ ಸಲುವಾಗಿ ಎಸ್ಐಟಿಯ ಬೆಳ್ತಂಗಡಿ ಕಚೇರಿಗೆ ಹಾಜರಾಗಿಲ್ಲ. ‘ಈ ನಾಲ್ವರು ಶೀಘ್ರವೇ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವ ನಿರೀಕ್ಷೆ ಇದೆ. ಅವರು ಬಾರದೇ ಇದ್ದರೆ, ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಲಾಗುತ್ತದೆ’ ಎಂದು ಎಸ್‌ಐಟಿ ಮೂಲಗಳು ಹೇಳಿವೆ.