ಸೋಮವಾರ, ಜನವರಿ 20, 2020
21 °C

ಯುವಕನಿಗೆ ಚೂರಿ ಇರಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ಸಮೀಪದ ತೊಕ್ಕೊಟ್ಟುವಿನಲ್ಲಿ ಶನಿವಾರ ರಾತ್ರಿ ಕರ್ಫ್ಯೂ ನಡುವೆಯೇ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಯುವಕನೊಬ್ಬನಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ.

ತೊಕ್ಕೊಟ್ಟು ನಿವಾಸಿ ನಿಖಿಲ್‌ ಕೋಟ್ಯಾನ್‌ (33) ಗಾಯಗೊಂಡಿರುವ ಯುವಕ. ರಾಷ್ಟ್ರೀಯ ಹೆದ್ದಾರಿ 66ರಿಂದ ಸಂಪರ್ಕ ಕಲ್ಪಿಸುವ ತೊಕ್ಕೊಟ್ಟು ಅಂಬಿಕಾ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಿಖಿಲ್‌ ಅವರ ಹೊಟ್ಟೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳುವನ್ನು ದೇರಳಕಟ್ಟೆಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಕ್ರಿಯಿಸಿ (+)