ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕರ್ ಮುರಿದು ಚಿನ್ನಾಭರಣ ಕಳವು: ಬಂಧನ

Published 5 ಸೆಪ್ಟೆಂಬರ್ 2023, 14:01 IST
Last Updated 5 ಸೆಪ್ಟೆಂಬರ್ 2023, 14:01 IST
ಅಕ್ಷರ ಗಾತ್ರ

ಬಜಪೆ: ಪೊರ್ಕೋಡಿಯ ಕರೋಡಿ ಎಂಬಲ್ಲಿ ಮನೆಯ ಬೆಡ್ ರೂಂನಲ್ಲಿದ್ದ ಕಬ್ಬಿಣದ ಕಪಾಟಿನ ಮಿನಿಲಾಕರ್ ಮುರಿದು ಸುಮಾರು ₹ 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಜಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಜಪೆಯ ತಾರೀಕಂಬ್ಳ ನಿವಾಸಿ ವಿನ್ಸೆಂಟ್ ಡಿಸೋಜ (34) ಎಂದು ಗುರುತಿಸಲಾಗಿದೆ.

ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್ ಪ್ರಕಾಶ್ ಅವರ ತಂಡ ಸೆ.4ರಂದು ಮದ್ಯಾಹ್ನ ಬಜಪೆಯ ಕಿನ್ನಿಪದವು ಚೆಕ್ ಪೋಸ್ಟ್ ಬಳಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಸುಮಾರು ₹ 5 ಲಕ್ಷ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ಪಿಎಸ್‌ಐಗಳಾದ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ, ಕುಮಾರೇಶನ್, ಲತಾ, ಎಎಸ್‌ಐ ರಾಮ ಪೂಜಾರಿ ಮೇರೆಮಜಲು, ರಶೀದ ಶೇಖ್, ಸುಜನ್, ರೋಹಿತ, ದುರ್ಗಾ ಪ್ರಸಾದ ಶೆಟ್ಟಿ, ಸಂತೋಷ, ಬಸವರಾಜ್ ಪಾಟೀಲ್, ಕೆಂಚನ ಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT