ಶನಿವಾರ, ಜನವರಿ 28, 2023
24 °C

ಕುಡಿತದ ಮತ್ತಿನಲ್ಲಿ ಜಗಳ: ಅಣ್ಣನಿಂದ ತಮ್ಮನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುತ್ತೂರು: ಪಾನಮತ್ತರಾಗಿ ನಡೆದ ಜಗಳದ ವೇಳೆ ಅಣ್ಣನೇ ತನ್ನ ಒಡಹುಟ್ಟಿದ ತಮ್ಮನಿಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಗುರುವಾರ ನಡೆದಿದೆ.

ಕೂಲಿ ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಿ ಹೊಸೂರು ನಿವಾಸಿ ಮಹಾದೇವ ಗೌಡ (45) ಕೊಲೆಯಾದವರು. ಆತನ ಅಣ್ಣ ನಿಂಗನ ಗೌಡ (58) ಕೊಲೆ ಮಾಡಿರುವ ಆರೋಪಿ.

ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿದ್ದ ಈ ಸಹೋದರರಿಬ್ಬರ ನಡುವೆ ಕುಡಿತದ ಮತ್ತಿನಲ್ಲಿ ಗುರುವಾರ ರಾತ್ರಿ ಜಗಳ ನಡೆದಿದೆ. ಈ ವೇಳೆ ನಿಂಗನ ಗೌಡ ಕಬ್ಬಿಣದ ಸಲಾಕೆಯಿಂದ ಮಹಾದೇವ ಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಅಲ್ಲಿಂದ ಪರಾರಿಯಾಗಿದ್ದಾನೆ.

ಶುಕ್ರವಾರ ಬೆಳಿಗ್ಗೆ ಘಟನೆ ಸ್ಥಳೀಯರ ಗಮನಕ್ಕೆ ಬಂದಿದೆ. ಪುತ್ತೂರು ನಗರ ಠಾಣೆಯ ಸ್ಥಳಕ್ಕೆ ಬಂದು ಆರೋಪಿ ನಿಂಗನ ಗೌಡ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಕಂಡುಬಂದಲ್ಲಿ ಪುತ್ತೂರು ನಗರ ಠಾಣೆಗೆ 08251-230555, 9480805361, 8147664989 ಮಾಹಿತಿ ನೀಡುವಂತೆ ಪುತ್ತೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು