ಮೊಸಳೆ ಕಂಡು ಬಂದ ಸುಮಾರು 500 ಮೀ. ದೂರದಲ್ಲಿ ನೇತ್ರಾವತಿ-ಕುಮಾರಧಾರ ನದಿಗಳು ಸಂಗಮವಾಗುತ್ತಿದ್ದು, ಅಲ್ಲೇ ಇರುವ ಸಹಸ್ರಲಿಂಗೇಶ್ವರ ದೇವಾಲಯದ ಬಳಿಯ ಸ್ನಾನಘಟ್ಟದಲ್ಲಿ ಪಿಂಡ ಪ್ರದಾನ ಕಾರ್ಯ, ತೀರ್ಥ ಸ್ನಾನಗಳು ನಿರಂತರವಾಗಿ ನಡೆಯುತ್ತಿವೆ. ಈ ಭಾಗದಲ್ಲಿ ನದಿಗೆ ಇಳಿದು ಮೀನು ಹಿಡಿಯಲು ಬಲೆ, ಗಾಳ ಹಾಕುವುದು ಸಾಮಾನ್ಯವಾಗಿದ್ದು, ಮೊಸಳೆ ಕಂಡು ಬಂದಿರುವುದು ಹಲವರ ಆತಂಕಕ್ಕೆ ಕಾರಣವಾಗಿದೆ.