17ರಂದು ಹಳೆಯಂಗಡಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕ್ರಾಸ್‌ಕಂಟ್ರಿ ಸ್ಪರ್ಧೆ

7

17ರಂದು ಹಳೆಯಂಗಡಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಕ್ರಾಸ್‌ಕಂಟ್ರಿ ಸ್ಪರ್ಧೆ

Published:
Updated:
Deccan Herald

ಮೂಲ್ಕಿ: ‘ಹಳೆಯಂಗಡಿ ಇಂದಿರಾನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  ಇದೇ 17ರಂದು ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಕ್ರಾಸ್‌ಕಂಟ್ರಿ ಚಾಂಪಿಯನ್‌ಶಿಪ್ ನಡೆಯಲಿದೆ’ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಬಿಪಿ.ಪ್ರಸನ್ನ ಹೇಳಿದರು.

 ಹಳೆಯಂಗಡಿ ಸರ್ಕಾರಿ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ವಿಶ್ವವಿದ್ಯಾಲಯ ಮಟ್ಟದ ಸುಮಾರು 40 ಕಾಲೇಜಿನ 300 ಕ್ರೀಡಾಪಟುಗಳ ಭಾಗವಹಿಸುವ ನಿರೀಕ್ಷೆ ಇದೆ. ಪುರುಷರ ವಿಭಾಗದಲ್ಲಿ 10 ಕಿ.ಮೀ ಮತ್ತು ಮಹಿಳೆಯರ ವಿಭಾಗದಲ್ಲಿ 6 ಕಿ.ಮೀ. ದೂರ ಕ್ರಮಿಸಬೇಕಾಗಿದೆ. ಈ ಪಂದ್ಯಾಟದಲ್ಲಿ ಆಯ್ಕೆಯಾದವರು ಅಕ್ಟೋಬರ್ 4ರಂದು ಗುಲ್ಬರ್ಗದಲ್ಲಿ ನಡೆಯಲಿರುವ ಅಲ್ಇಂಡಿಯಾ ವಿಶ್ವವಿದ್ಯಾಲಯ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ವಿನೋಸದ್‌ಕುಮಾರ್ ಬೊಳ್ಳೂರು ಮಾತನಾಡಿ, ‘ಸ್ಪರ್ಧೆಯಿಂದ ಕಾಲೇಜಿನ ಗೌರವ ಹೆಚ್ಚುತ್ತದೆ’ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಿಸಿಎ ಬ್ಯಾಂಕ್‌ನ ಅಧ್ಯಕ್ಷ ಎಸ್.ಎಸ್.ಸತೀಶ್ ಭಟ್ ಕೊಳುವೈಲು, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹಿಮಕರ್ ಕದಿಕೆ, ದೈಹಿಕ ನಿರ್ದೇಶಕ ಪ್ರವೀಣ್‌ಕುಮಾರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !