ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪರ್ ಜಾಯ್ ಚಂಡಮಾರುತ; ಉಳ್ಳಾಲದಲ್ಲಿ ಬಿರುಸುಗೊಂಡ ಸಮುದ್ರದ ಅಲೆಗಳು

Published 7 ಜೂನ್ 2023, 9:23 IST
Last Updated 7 ಜೂನ್ 2023, 9:23 IST
ಅಕ್ಷರ ಗಾತ್ರ

ಉಳ್ಳಾಲ: ಬಿಪರ್ ಜಾಯ್ ಚಂಡಮಾರುತದ ಪರಿಣಾಮ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಪ್ರದೇಶಗಳಲ್ಲಿ ಅರಬ್ಬೀಸಮುದ್ರ ತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಬುಧವಾರ ಬೆಳಗಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರಕ್ಕೆ ಭೇಟಿ ನೀಡಿದ್ದ ಪ್ರವಾಸಿಗರನ್ನು ಗೃಹರಕ್ಷಕ ಹಿಂದಕ್ಕೆ ಕಳುಹಿಸಿದರು.

ಚಂಡಮಾರುತದ ಪ್ರಭಾವದಿಂದ ಗಾತ್ರದ ಅಲೆಗಳು ಏಳುತ್ತಿದ್ದು, ಸಮುದ್ರದ ಅಂಚಿನ ಬಂಡೆಕಲ್ಲುಗಳಿಗೆ ವೇಗದಿಂದ ಬಂದು ಅಪ್ಪಳಿಸುತ್ತಿವೆ. ಉಳ್ಳಾಲದ ಕೋಟೆಪುರ, ಕೋಡಿ, ಮೊಗವೀರಪಟ್ಣ, ಹಿಲೆರಿಯಾ ನಗರ, ಸುಭಾಷನಗರ, ಕೈಕೊ, ಸಮ್ಮರ್ ಸ್ಯಾಂಡ್, ಸೋಮೇಶ್ವರ, ಉಚ್ಚಿಲ, ಬಟ್ಟಪಾಡಿ ಸಮುದ್ರ ತೀರದ ನಿವಾಸಿಗಳಿಗೆ ಸ್ಥಳೀಯಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಠಾಣಾ ಪೊಲೀಸರು, ಗೃಹರಕ್ಷಕ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT