ಸೋಮವಾರ, ಜೂನ್ 21, 2021
20 °C

ಮಂಗಳೂರು: ‘ತೌಕ್ತೆ’ ಚಂಡಮಾರುತದ ಆತಂಕ, ಹಿಂದಿರುಗುವಂತೆ ಮೀನುಗಾರರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ‘ತೌಕ್ತೆ’ ಚಂಡಮಾರುತ ಏಳುವ ಸಾಧ್ಯತೆಗಳಿವೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮೇ 16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ತೀವ್ರವಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ದೋಣಿಗಳು, ಮೀನುಗಾರಿಕೆಗೆ ಇಳಿಯಬಾರದು. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ದೋಣಿಗಳು ದಡಕ್ಕೆ ಸೇರುವಂತೆ ಕರಾವಳಿ ಕಾವಲು ಪಡೆ ಸೂಚಿಸಿದೆ.

ಗಸ್ತು ತಿರುಗುತ್ತಿರುವ ಕರಾವಳಿ ಕಾವಲು ಪಡೆಯ ಹಡಗುಗಳು ಹಾಗೂ ವಿಮಾನಗಳ ಮೂಲಕ ಸಮುದ್ರದಲ್ಲಿರುವ ಮೀನುಗಾರರಿಗೆ ಹವಾಮಾನ ಎಚ್ಚರಿಕೆ ನೀಡಿ ಹತ್ತಿರದ ತೀರಕ್ಕೆ ಮರಳಲು ತಿಳಿಸಲಾಗುತ್ತಿದೆ ಎಂದು ಕರಾವಳಿ ಕಾವಲು ಪಡೆ ಕಮಾಂಡರ್‌ ವೆಂಕಟೇಶ್‌ ತಿಳಿಸಿದ್ದಾರೆ.

ತೌಕ್ತೆ ಚಂಡಮಾರುತದಿಂದ ಕರ್ನಾಟಕದ ಕರಾವಳಿ, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ ಮೇ 16ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು