ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಇಟಿ: ದ.ಕ. ವಿದ್ಯಾರ್ಥಿಗಳ ಸಾಧನೆ

ಮೊದಲ 10 ರ‍್ಯಾಂಕ್‌ ಗಳಿಕೆಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ
Last Updated 21 ಆಗಸ್ಟ್ 2020, 13:15 IST
ಅಕ್ಷರ ಗಾತ್ರ

ಮಂಗಳೂರು: ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ. ಎಂಜಿನಿಯರಿಂಗ್, ಬಿಎಸ್ಸಿ ಕೃಷಿ, ಬಿಎಸ್ಸಿ ಪಶು ವಿಜ್ಞಾನ, ಫಾರ್ಮಸಿ, ಯೋಗ ವಿಜ್ಞಾನ ಮತ್ತು ನ್ಯಾಚುರೋಪಥಿ ವಿಭಾಗಗಳ ಮೊದಲ 10 ರ‍್ಯಾಂಕ್‌ಗಳಲ್ಲಿ ಜಿಲ್ಲೆಯ 13 ವಿದ್ಯಾರ್ಥಿಗಳಿದ್ದು, ರ‍್ಯಾಂಕ್‌ ಗಳಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿ ವಿದ್ಯಾರ್ಥಿ ವರುಣ್ ಗೌಡ ಎ.ಬಿ. ಪ್ರಥಮ ರ‍್ಯಾಂಕ್‌ ಗಳಿಸಿದ್ದರೆ, ಯೋಗ ವಿಜ್ಞಾನ ಮತ್ತು ನ್ಯಾಚುರೋಪಥಿ ವಿಭಾಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿ ಆರ್ನವ್ ಅಯ್ಯಪ್ಪ ಪಿ.ಪಿ. ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ಎಂಜಿನಿಯರಿಂಗ್ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ಶಶಾಂಕ್ ಪಿ. ತೃತೀಯ, ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಗೌರೀಶ ಕಜಂಪಾಡಿ 9ನೇ ರ‍್ಯಾಂಕ್‌ ಗಳಿಸಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿ ಆರ್ನವ್ ಅಯ್ಯಪ್ಪ ಪಿ.ಪಿ. 4ನೇ ರ‍್ಯಾಂಕ್‌, ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿ ಎಚ್.ಸಿ.ಗೌರೀಶ್ 9ನೇ ರ‍್ಯಾಂಕ್‌ ಗಳಿಸಿದ್ದಾರೆ.

ಬಿಎಸ್ಸಿ ಪಶು ವಿಜ್ಞಾನ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಆರ್ನವ್ ಅಯ್ಯಪ್ಪ ಪಿ.ಪಿ. 5ನೇ ರ್ಯಾಂಕ್, ಮಂಗಳೂರು ಎಕ್ಸ್‌ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿ ವರುಣ್ ಗೌಡ ಎ.ಬಿ., ಮಂಗಳೂರಿನ ಶಾರದಾ ಪಿಯು ಕಾಲೇಜು ವಿದ್ಯಾರ್ಥಿ ತೇಜಸ್ ಭಟ್ 10ನೇ ರ‍್ಯಾಂಕ್‌ ಗಳಿಸಿದ್ದಾರೆ.

ಬಿ ಫಾರ್ಮಾ/ ಡಿ ಫಾರ್ಮಾ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿ ಆರ್ನವ್ ಅಯ್ಯಪ್ಪ ಪಿ.ಪಿ. 7ನೇ ರ‍್ಯಾಂಕ್‌, ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಗೌರೀಶ ಕಜಂಪಾಡಿ 10ನೇ ರ‍್ಯಾಂಕ್‌ ಗಳಿಸಿದ್ದಾರೆ.

ಯೋಗ ವಿಜ್ಞಾನ ಮತ್ತು ನ್ಯಾಚುರೋಪಥಿ ವಿಭಾಗದಲ್ಲಿ ಮಂಗಳೂರು ಎಕ್ಸ್‌ಪರ್ಟ್ ಕಾಲೇಜಿನ ವಿದ್ಯಾರ್ಥಿ ವರುಣ್ ಗೌಡ ಎ.ಬಿ. 5ನೇ ರ‍್ಯಾಂಕ್‌ ಗಳಿಸಿದ್ದಾರೆ.

ಸಿಇಟಿಯ ಒಟ್ಟು 50 ರ‍್ಯಾಂಕ್‌ಗಳಲ್ಲಿ ಬೆಂಗಳೂರು 16, ದಕ್ಷಿಣ ಕನ್ನಡ 13, ಮೈಸೂರು 6, ಬೀದರ್ 5, ಹುಬ್ಬಳ್ಳಿ 3, ಕೋಟ ರಾಜಸ್ಥಾನ 3, ಹೊರರಾಜ್ಯ- 2, ದಾವಣಗೆರೆ ಮತ್ತು ಹಾಸನ- ತಲಾ 1 ರ‍್ಯಾಂಕ್‌ ಪಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT