ಬುಧವಾರ, ಮೇ 18, 2022
24 °C
ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ಸಂಭ್ರಮೋತ್ಸವ; ಕೊಠಡಿ, ಕಲಿಕಾ ಭವನ ಉದ್ಘಾಟನೆ

ಭಾಷಾ ಪ್ರಾವೀಣ್ಯ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಟ್ವಾಳ: ‘ಮಾತೃಭಾಷೆ ಜೊತೆಗೆ ಇತರ ಭಾಷೆಗಳಿಗೆ ಪ್ರಾಮುಖ್ಯತೆ ನೀಡಿದಾಗ ಭಾಷಾ ಪ್ರಾವೀಣ್ಯತೆ ಲಭಿಸುತ್ತದೆ’
ಎಂದು ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಇಲ್ಲಿನ ದಡ್ಡಲಕಾಡು ಸರ್ಕಾರಿ ಆಂಗ್ಲ‌ ಮಾಧ್ಯಮ ಶಾಲೆಯಲ್ಲಿ ಶ್ರೀದುರ್ಗಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಆರಂಭಗೊಂಡ ಎರಡು ದಿನಗಳ ಸಂಭ್ರಮೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೂತನವಾಗಿ ನಿರ್ಮಾಣಗೊಂಡ 13 ಕೊಠಡಿ ಮತ್ತು ಕಲಿಕಾ ಭವನ, ಕಂಪ್ಯೂಟರ್ ತರಗತಿ, ಡಿಜಿಟಲ್ ಗ್ರಂಥಾಲಯ, ಪ್ರಯೋಗಾಲಯವನ್ನು ಅವರು ಉದ್ಘಾಟಿಸಿದರು.

‘ಶಾಲಾ ಸುಸಜ್ಜಿತ ಕಟ್ಟಡದ ಜೊತೆಗೆ ಶಿಕ್ಷಣದಲ್ಲೂ ಮೇಲ್ಪಂಕ್ತಿ ಅನುಸರಿಸಿ, ಫಲಿತಾಂಶದಲ್ಲೂ ಉತ್ತಮ ಸಾಧನೆ ಗಳಿಸಲು ಶಿಕ್ಷಕರ ಪ್ರಯತ್ನ ನಡೆಯಲಿ’ ಎಂದು ಹೇಳಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅಧ್ಯಕ್ಷತೆ ವಹಿಸಿ ಮಾತನಾಡಿ, ಹಳ್ಳಿಯಲ್ಲಿ ಕಲಿಯುವ ಮಕ್ಕಳು ಗುಣದಲ್ಲಿ ಶ್ರೀಮಂತರು ಮತ್ತು ಪುಣ್ಯವಂತರು ಎಂದರು.

‘ಭಾರತ ಸಂವಿಧಾನ’ ಬಗ್ಗೆ ಕುಡುಚಿ ಶಾಸಕ ಪಿ. ರಾಜೀವ್ ದಿಕ್ಸೂಚಿ ಭಾಷಣ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಎಸ್.ಎಲ್. ಭೋಜೇಗೌಡ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಎಂ, ಪಂಜಿಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಸಂಜೀವ ಪೂಜಾರಿ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕೆಯುಡಬ್ಲ್ಯುಎಸ್ ನಿರ್ದೇಶಕಿ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಸ್ಥಾಪಕ ಶಿಕ್ಷಕ ಸಂಜೀವ ಗೌಡ, ತಹಶೀಲ್ದಾರ್ ರಶ್ಮಿ ಎಸ್.ಆರ್, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಙಾನೇಶ್, ಎಂಆರ್‌ಪಿಎಲ್ ಮ್ಯಾನೇಜರ್ ಸಂಪತ್, ಪ್ರಮುಖರಾದ ಜಗನ್ನಾಥ ಬಂಗೇರ ನಿರ್ಮಾಲ್, ಡೊಂಬಯ್ಯ ಅರಳ, ಸುದರ್ಶನ್ ಬಜ ಇದ್ದರು.

ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಮುಖ್ಯಶಿಕ್ಷಕ ರಮಾನಂದ ವಂದಿಸಿದರು. ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಅಂಚನ್ ಮತ್ತು ಟ್ರಸ್ಟಿ ರಾಮಚಂದ್ರ ಪೂಜಾರಿ ಕರೆಂಕಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.