ಪುತ್ತೂರು: ತಾಲ್ಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಗಾಳಿ–ಮಳೆಯಿಂದಾಗಿ ವಿವಿಧೆಡೆ ಮರಗಳು ಉರುಳಿ, ಗುಡ್ಡ ಕುಸಿದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ವಿವಿಧೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ ಅಣ್ಣು ನಾಯ್ಕ ಅವರ ಮನೆಯ ಪಕ್ಕದ ಗುಡ್ಡ ಕುಸಿದು ಮನೆಯ ಗೋಡೆಗೆ ಹಾನಿಯಾಗಿದೆ. ಗ್ರಾಮದ ಎಣ್ಣೆಗದ್ದೆ ನಿವಾಸಿ ಅಬ್ದುಲ್ ಅಝೀಝ್ ಅವರ ಮನೆಯ ಪಕ್ಕದ ಬಾವಿ ಕುಸಿದಿದೆ. ಪಾಣಾಜೆ ಗ್ರಾ.ಪಂ.ಅಧ್ಯಕ್ಷೆ ಮೈಮುನತ್ಉಲ್ ಮೆಹ್ರಾ, ಅಭಿವೃದ್ಧಿ ಅಧಿಕಾರಿ ಆಶಾ, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ರಸ್ತೆ ಬಂದ್:

ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಡ್ನೂರು ಗ್ರಾಮ ವ್ಯಾಪ್ತಿಯ ಪರನೀರು-ಸಸ್ಪೇಟಿ ರಸ್ತೆಯ ಸಲ್ಪೇಟಿ ಎಂಬಲ್ಲಿ ರಸ್ತೆ ಬದಿಯ ಗುಡ್ಡ ಕುಸಿದು ರಸ್ತೆ ಸಂಚಾರ ವ್ಯತ್ಯಯವಾಗಿತ್ತು. ಅರಿಯಡ್ಕ ಗ್ರಾಮದ ಗುಂಡ್ಯಡ್ಕ, ಮಾಯಿಲಕೊಚ್ಚಿ, ಶೇಷಗಿರಿ, ಕುಂಟಾವಿನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿವಿಧೆಡೆ ಅಡಿಕೆಮರಗಳು ನೆಲಕ್ಕುರುಳಿವೆ.

ನಿಡ್ಪಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಳಂಬೆ-ಕುಡ್ಚಿಲ ರಸ್ತೆಯ ಪಳಂಬೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ರಸ್ತೆ ಬದಿಯ ಮರ ರಸ್ತೆಗೆ ಬಿದ್ದಿತ್ತು. ಇದರಿಂದ 3 ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ.

ಪುತ್ತೂರು-ಪಾಣಾಜೆ ರಸ್ತೆಯ ರೆಂಜದಿಂದ ಕೌಡಿಚ್ಚಾರು-ಸುಳ್ಯಪದವು ರಸ್ತೆಯ ಮುಡ್ಪಿನಡ್ಕಕ್ಕೆ ಸಂಪರ್ಕ ಕಲ್ಪಿಸುವ ರೆಂಜ-ಮುಡ್ಪಿನಡ್ಕ ರಸ್ತೆಯಲ್ಲಿ ರೆಂಜ ಸಮೀಪ ರಸ್ತೆಬದಿಯ ಗುಡ್ಡ ಕುಸಿದು ಚರಂಡಿ ಮುಚ್ಚಿಹೋಗಿದೆ. ಮಳೆನೀರು ರಸ್ತೆಯಲ್ಲೇ ಹರಿದು ಹೋಗುತ್ತಿದೆ. ಈ ಭಾಗದಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.