ಶನಿವಾರ, ಜನವರಿ 28, 2023
24 °C

ಅಪಘಾತ: ಯುವಕನ ಮಿದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಕುಟುಂಬದವರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ಇಲ್ಲಿನ ಕುತ್ತಾರು ಬಳಿ ಶನಿವಾರ ತಡರಾತ್ರಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೊಕ್ಕೊಟ್ಟು ಸೇವಂತಿಗುತ್ತು ನಿವಾಸಿ ಭೂಷಣ್ ರೈ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಅವರ ಅಂಗಾಂಗ ದಾನ ನಡೆಸಲು ಕುಟುಂಬದವರು ಮುಂದಾಗಿದ್ದಾರೆ.

ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬೈಕ್‌ನಲ್ಲಿ ಭೂಷಣ್‌ ಸಾಗುತ್ತಿದ್ದಾಗ ಕುತ್ತಾರು ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ.

ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಕೆಲಕಾಲ ಬಿದ್ದಿದ್ದ ಅವರನ್ನು ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕೇರಳದ ಐವರು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿದ್ದರು.

ಬಳಿಕ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುವಿನ ಮಿದುಳು ನಿಷ್ಕ್ರಿಯಗೊಂಡಿರುವುದನ್ನು ಅಲ್ಲಿನ ವೈದ್ಯರು ದೃಢಪಡಿಸಿದ್ದಾರೆ. ಭಾನುವಾರ ಸಂಜೆ 4 ಗಂಟೆ ನಂತರ ನಡೆದ ವೈದ್ಯಕೀಯ ಪರೀಕ್ಷೆ ಬಳಿಕ ಅಂಗಾಂಗ ದಾನ ನಡೆಸುವ ಕುರಿತು ಕುಟುಂಬಸ್ಥರು ಒಪ್ಪಿಗೆ ಸೂಚಿಸಿದರು.

ಭೂಷಣ್ ಅವರ ಸಹೋದರಿಯ ವಿವಾಹ ಎರಡು ವಾರಗಳ ಹಿಂದೆಯಷ್ಟೇ ನಡೆದಿದೆ. ಅವರ ತಂದೆ ಮಾರಪ್ಪ ರೈ ವರ್ಷದ ಹಿಂದೆಯಷ್ಟೇ ಸಾವನ್ನಪ್ಪಿದ್ದರು. ಅವರಿಗೆ ತಾಯಿ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.