ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಟ್ವಾಳ: ಬಿಜೆಪಿ ಸಹಕಾರಿ ಸಂಭ್ರಮ ಉದ್ಘಾಟನೆ

Last Updated 8 ಜನವರಿ 2023, 13:59 IST
ಅಕ್ಷರ ಗಾತ್ರ

ಬಂಟ್ವಾಳ: ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಸಹಕಾರಿಗಳು ಕೃಷಿಕರಾಗಿದ್ದು, ಸಹಕಾರಿ ತತ್ವ ಕೃಷಿಗೆ ಪೂರಕವಾಗಿದೆ. ಮಿಶ್ರಬೆಳೆ ಮತ್ತು ಆಧುನಿಕ ತಂತ್ರಜ್ಞಾನ ಜೊತೆಗೆ ಸಾವಯವ ಗೊಬ್ಬರ ಬಳಕೆ ಮೂಲಕ ಕೃಷಿ ಲಾಭದಾಯಕವನ್ನಾಗಿಸಲು ಸಾಧ್ಯವಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.

ಇಲ್ಲಿನ ಬಿಜೆಪಿ ಸಹಕಾರ ಪ್ರಕೋಷ್ಠ ವತಿಯಿಂದ ಒಡ್ಡೂರು ಫಾರ್ಮ್ಸ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಸಹಕಾರಿ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.

ದೇಶದಲ್ಲಿ ಸಹಕಾರಿ ಇಲಾಖೆಗೆ ಬಲಿಷ್ಠ ಶಕ್ತಿ ನೀಡುವ ಕಾಯಕದಲ್ಲಿ ಕೇಂದ್ರ ಸಹಕಾರಿ ಸಚಿವ ಅಮಿತ್ ಶಾ ತೊಡಗಿಸಿಕೊಂಡಿದ್ದಾರೆ ಎಂದರು.

ಕಲ್ಲಡ್ಕ ರೈತರ ಸೇವಾ ಸಹಕಾರಿ ಅಧ್ಯಕ್ಷ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಕಾರ್ಯಕ್ರಮ ಉದ್ಘಾಟಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಇದ್ದರು.

ನಬಾರ್ಡ್‌ ನಿವೃತ್ತ ಅಧಿಕಾರಿ ವೆಂಕಟಸ್ವಾಮಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಅರುಣ್ ರೋಷನ್ ಡಿಸೋಜ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಕೆಎಂಎಫ್ ನಿರ್ದೇಶಕ ಸುಧಾಕರ ರೈ, ಸವಿತಾ ಶೆಟ್ಟಿ, ನೇರಳಕಟ್ಟೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ, ಬಂಟ್ವಾಳ ಸಹಕಾರ ಭಾರತಿ ಅಧ್ಯಕ್ಷ ವಿಶ್ವನಾಥ ಎಂ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ಹಿರಿಯ ಸಹಕಾರಿ ಸುಂದರ ಭಂಡಾರಿ ರಾಯಿ ಇದ್ದರು.

ಬಂಟ್ವಾಳ ಸಹಕಾರಿ ಪ್ರಕೋಷ್ಠ ಸಂಚಾಲಕ ಜಯಶಂಕರ ಬಾಸ್ರಿತ್ತಾಯ ಸ್ವಾಗತಿಸಿದರು. ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಮತ್ತು ರವೀಶ್ ಶೆಟ್ಟಿ ಕರ್ಕಳ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT