ಬೆಳ್ತಂಗಡಿ: ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಶನಿವಾರ ಗುರುವಾಯನಕೆರೆ ಶಕ್ತಿನಗರದಿಂದ ಹೊರಟ ತಾಲ್ಲೂಕಿನ ಎಲ್ಲ ಗ್ರಾಮಸ್ಥರ ಹಸಿರು ಹೊರೆಕಾಣಿಕೆಗೆ ಉದ್ಯಮಿ ಮೋಹನ್ ಕುಮಾರ್ ಚಾಲನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಿಂದ ಹೊರೆಕಾಣಿಕೆ ಸಮರ್ಪಿಸಲು ಭಕ್ತರು ಹಸಿರುವಾಣಿಯೊಂದಿಗೆ ಬಂದಿದ್ದರು. ಪುತ್ತೂರು, ಬಂಟ್ವಾಳ, ಮೂಡುಬಿದರೆ, ಸುಳ್ಯ, ಮಂಗಳೂರು ಬಳ್ಳಾರಿ, ಬೆಳಗಾವಿಯಿಂದ ಹೊರೆಕಾಣಿಕೆ ಬಂದಿತ್ತು. ಗುರುವಾಯನಕೆರೆಯಿಂದ ವೇಣೂರು ದೇವಸ್ಥಾನವರೆಗೆ 100ಕ್ಕೂ ಅಧಿಕ ವಾಹನಗಳಲ್ಲಿ ಹೊರೆಕಾಣಿಕೆ ವಾದ್ಯ ಘೋಷದೊಂದಿಗೆ ಸಾಗಿಬಂತು.

ಶಾಸಕ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್, ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ, ಪ್ರಧಾನ ಅರ್ಚಕ ವಿಷ್ಣುಮೂರ್ತಿ ಭಟ್, ರಾಜೇಶ್ ಮೂಡುಕೋಡಿ, ನೇಮಯ್ಯ ಕುಲಾಲ್, ಮೀನಾಕ್ಷಿ ಶೆಟ್ಟಿ, ಸಂತೋಷ್ ಕುಮಾರ್ ಜೈನ್, ಸಂತೋಷ್ ಕುಮಾರ್ ಮುಂಡೂರು, ಆಶಾಲತಾ, ಪ್ರದೀಪ ಶೆಟ್ಟಿ, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಯೋಜನಾಧಿಕಾರಿ ಯಶವಂತ್ ಎಸ್, ಸಂತೋಷ್ ಕುಮಾರ್ ಕಾಪಿನಡ್ಕ, ವಿಠಲ ಸಿ.ಪೂಜಾರಿ, ಸತೀಶ್ ವೇಣೂರು, ವಿವಿಧ ಸಮಿತಿ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.