ಗುರುವಾರ , ಮಾರ್ಚ್ 23, 2023
29 °C

ಕೊಲ್ಯ: ಕಾರು ಅಪಘಾತ, ಮತ್ತೊಬ್ಬ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ- ಅಡ್ಕ ನಡುವೆ ಸಂಭವಿಸಿದ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಅವರ ಸೋದರ ಸಂಬಂಧಿ ಅಬ್ದುಲ್ ರಿಫಾಯಿ ಭಾನುವಾರ ಮೃತಪಟ್ಟಿದ್ದರು.

ಬಾಷರ್ ಅಹಮ್ಮದ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು.

ಜ.28ರಂದು ಗಲ್ಫ್‌ನಿಂದ ಬಂದಿದ್ದ ಮಹಮ್ಮದ್ ರಿಫಾಯಿ ಅವರ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ ಫಾತಿಮಾ ಹಾಗೂ ರೇವತಿ ಮಂಗಳೂರಿನಿಂದ ತಲಪಾಡಿ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಕೊಲ್ಯ ಸಮೀಪ ಕಾರು ಚಾಲಕನ ನಿಯಂತ್ರಣ ಕಳೆದು ರಸ್ತೆ ವಿಭಜಕಕ್ಕೆ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿತ್ತು.
ಅಬ್ದುಲ್ ರಿಫಾಯಿ ಅವರು ಕಟ್ಟಡ ಗುತ್ತಿಗೆದಾರ ಸಯ್ಯದ್ ಎಂಬುವರ ಪುತ್ರ. ಅವರಿಗೆ ತಾಯಿ, ಇಬ್ಬರು ಸಹೋದರರು ಹಾಗೂ ಮೂವರು ಸಹೋದರಿಯರು ಇದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದಲ್ಲಿ ಗಾಯಗೊಂಡ ರೇವತಿ ಹಾಗೂ ಫಾತಿಮಾ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು