ಬೆಳ್ತಂಗಡಿ: ‘ಕಾರ್ಮಿಕರ ನ್ಯಾಯಕ್ಕಾಗಿ ಅಂಬೇಡ್ಕರ್ ನಿರಂತರ ಹೋರಾಟ ನಡೆಸಿ, ನ್ಯಾಯ ಒದಗಿಸಿ ಕೊಟ್ಟಿದ್ದಾರೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಕಂಕನಾಡಿ ಹೇಳಿದರು.

ಪಟ್ಟಣ ಮತ್ತು ಗ್ರಾಮ ಪಂಚಾಯಿತಿ ಪೌರಕಾರ್ಮಿಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೇತೃತ್ವದಲ್ಲಿ ಬೆಳ್ತಂಗಡಿ ನಾರಾಯಣ ಗುರು ಸಭಾಂಗಣದಲ್ಲಿ ನಡೆದ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್ ಕೆ.ಮಾತನಾಡಿದರು.

ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಪೌರ ಕಾರ್ಮಿಕರ ಮಕ್ಕಳಾದ ಗಗನ್ ಕುಮಾರ್, ಹರ್ಷಿತಾ, ಕೀರ್ತನಾ, ಶ್ರಾವ್ಯ, ಧನುಶ್ರೀ, ಕಿರಣ್ ಹಾಗೂ ಹರಿಣಾಕ್ಷಿ ಅವರನ್ನು ಸನ್ಮಾನಿಸಲಾಯಿತು.

ಪಟ್ಟಣ ಮತ್ತು ಗ್ರಾಮ ಪಂಚಾಯಿತಿ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಸುದೆಮುಗೇರು ಅಧ್ಯಕ್ಷತೆ ವಹಿಸಿದ್ದರು.

ಪೌರ ಕಾರ್ಮಿಕರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಆನಂದ ಎಸ್.ಪಿ., ದಸಂಸ (ಅಂಬೇಡ್ಕರ್ ವಾದ) ಮೈಸೂರು ವಿಭಾಗ ಸಂಚಾಲಕ ಬಿ.ಕೆ.ವಸಂತ , ದಸಂಸ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲ್ಲೂಕು ಘಟಕ ಸಂಚಾಲಕ ರಮೇಶ್ ಆರ್., ಗ್ರಾಮ ಪಂಚಾಯಿತಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ರೇಣುಕಾ, ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರೇಮ್ ಬಲ್ಲಾಳ್ ಬಾಗ್ ಭಾಗವಹಿಸಿದ್ದರು.

ಪಟ್ಟಣ ಪಂಚಾಯಿತಿಯ ಚಾಲಕ ಶಿವಕುಮಾರ್ ಸ್ವಾಗತಿಸಿದರು. ಸಂಘದ ಗೌರವ ಸಲಹೆಗಾರ ಶೇಖರ್ ಲಾಯಿಲ ನಿರೂಪಿಸಿ, ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-29-1203062615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.