ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಪೈಕಿ ಆರರಲ್ಲಿ ಬಿಜೆಪಿ ಶಾಸಕರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಸತತ ಪರಿಶ್ರಮ ಹಾಕಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿ ರಾಧಾ ಮೋಹನದಾಸ್ ಅಗರ್ವಾಲ್ ಹೇಳಿದರು.

‘ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026’ರ ಅಂಗವಾಗಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ನಗರದ ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಏರ್ಪಡಿಸಿದ್ದ ಎರಡು ದಿನಗಳ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದ ಸಮಾರೋಪದಲ್ಲಿ ಅವರು ಮಂಗಳವಾರ ಮಾತನಾಡಿದರು.

‘ಮಂಗಳೂರು ಹಾಗೂ ಪುತ್ತೂರು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲೇಬೇಕು. ಇದಕ್ಕಾಗಿ ನಾನೂ ಕೆಲಸ ಮಾಡುತ್ತೇನೆ. ಆರಂಭದಿಂದ ಇಂದಿನವರೆಗೆ ಅನೇಕ ಹಿರಿಯರು ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ. ಅವರೆಲ್ಲರನ್ನು ನಾವು ನೆನಪಿಟ್ಟುಕೊಳ್ಳಬೇಕು’ ಎಂದು ಅವರು ತಿಳಿಸಿದರು.

‘ಜಗತ್ತಿನ ಅತಿದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿ ಹುಟ್ಟಿನಿಂದ ಇದುವರೆಗೆ ವೈಚಾರಿಕ ಶುದ್ಧತೆ ಕಾಪಾಡಿಕೊಂಡಿದೆ. ಪಂಡಿತ್ ದೀನದಯಾಳ್ ಉಪಾಧ್ಯಾಯರ ಏಕಾತ್ಮತಾ ಮಾನವತಾವಾದದ ಅಡಿಯಲ್ಲಿ ಪಕ್ಷ ಮುನ್ನಡೆಯುತ್ತಿದೆ. ಎಂತಹದ್ದೇ ಸಂದರ್ಭ ಎದುರಾದರೂ ಪಕ್ಷವು ಸಿದ್ಧಾಂತದ ಜತೆ ರಾಜಿ ಮಾಡಿಕೊಂಡ ಉದಾಹರಣೆಗಳಿಲ್ಲ. ಯಾವುದೇ ಸವಾಲು ಎದುರಾದರೂ ಸಿದ್ಧಾಂತ ಬಿಟ್ಟು ಹೋಗಿಲ್ಲ. ಇದು ಬಿಜೆಪಿಯ ವಿಶೇಷತೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ದ.ಕ. ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ‘ಪ್ರಶಿಕ್ಷಣ ವರ್ಗ ಎರಡು ದಿನ ಅತ್ಯಂತ ಶಿಸ್ತಿನಿಂದ ನಡೆದಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ’ ಎಂದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್, ಡಾ. ವೈ. ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಭಾಗೀರಥಿ ಮುರುಳ್ಯ, ಹರೀಶ್ ಪೂಂಜ, ಜಿಲ್ಲಾ ಪ್ರಶಿಕ್ಷಣ ಪ್ರಭಾರಿ, ಶಾಸಕ ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ವಿಭಾಗ ಪ್ರಭಾರಿ ಭಾರತೀಶ್, ಸಹ ಪ್ರಭಾರಿ ಜಯಂತ್ ಕೋಟ್ಯಾನ್, ವಿಕಾಸ್ ಪುತ್ತೂರು ಮತ್ತಿತರರು ಭಾಗವಹಿಸಿದ್ದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಪ್ರೇಮಾನಂದ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷೆ ಮಂಜುಳಾ ರಾವ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-1989503755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.