ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕರರ ಸಹಕಾರ ಸಂಘ: ₹63 ಲಕ್ಷ ಲಾಭ, ಶೇ 20 ಲಾಭಾಂಶ ವಿತರಣೆ

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ
Last Updated 12 ಡಿಸೆಂಬರ್ 2021, 6:45 IST
ಅಕ್ಷರ ಗಾತ್ರ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ‘ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ’ವು ಕೋವಿಡ್ ಸಂಕಷ್ಟ ಸಂದರ್ಭದಲ್ಲೂ ಸದಸ್ಯರೆಲ್ಲರ ಸಂಪೂರ್ಣ ಸಹಕಾರದಿಂದ ಉತ್ತಮ ಪ್ರಗತಿ ಸಾಧಿಸಿದೆ. 2020-21ನೇ ಸಾಲಿನಲ್ಲಿ ಸಂಘವು ₹63.62 ಲಕ್ಷ ಲಾಭ ಗಳಿಸಿ, ಸದಸ್ಯರಿಗೆ ಶೇ 20 ಲಾಭಾಂಶ ನೀಡಿದೆ (ಡಿವಿಡೆಂಡ್) ಎಂದು ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ತಿಳಿಸಿದರು.

ನಗರದಲ್ಲಿರುವ ಸಂಘದ ಪ್ರಧಾನ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ 90ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವ್ಯವಹಾರ: ಸದಸ್ಯರಿಗೆ ಕಡಿಮೆ ಬಡ್ಡಿ ದರದ ಸಾಲ, ಠೇವಣಿಗಳಿಗೆ ಆಕರ್ಷಕ ಬಡ್ಡಿಯನ್ನು ನೀಡಿಯೂ ಸಂಘವು ವರದಿ ವರ್ಷದಲ್ಲಿ ಅಧಿಕ ಲಾಭ ಗಳಿಸಿದೆ. ಸಂಘವು ₹34.40 ಲಕ್ಷ ಪಾಲು ಬಂಡವಾಳ, ₹3.42 ಕೋಟಿ ವಿವಿಧ ನಿಧಿಗಳನ್ನು ಹೊಂದಿದೆ. ಠೇವಣಿ ಸಂಗ್ರಹವು ಕಳೆದ ವರ್ಷಾಂತ್ಯಕ್ಕೆ ₹ 50.83 ಕೋಟಿ ಇದ್ದದ್ದು, ಈ ವರ್ಷದಲ್ಲಿ ₹ 61.56 ಕೋಟಿಗೆ ಏರಿಕೆಯಾಗಿದೆ. ಸಾಲ ಮುಂಗಡ 48.54 ಕೋಟಿಗೆ ಹೆಚ್ಚಳವಾಗಿದೆ. ಸಂಘದ ಒಟ್ಟು ವ್ಯವಹಾರ ₹110.10 ಕೋಟಿಗೆ ಏರಿಕೆಯಾಗಿದೆ
ಎಂದರು.

ಸಂಘವು ಹೊಂದಿದ್ದು, ಈ ಸುಸಜ್ಜಿತ ಕಟ್ಟಡದಲ್ಲಿ ಕೇಂದ್ರ ಕಚೇರಿ ,ಆಡಳಿತ ಮಂಡಳಿ ಸಭಾಂಗಣ ಸೇರಿದಂತೆ ಸಪ್ತವರ್ಣ ಸಭಾಭವನವೂ ಇದೆ .

ಸತತ 4ನೇ ಪ್ರಶಸ್ತಿ: ಸಂಘದ ಪ್ರಗತಿಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ಮೂರು ವರ್ಷಗಳಿಂದ ಸಾಧನಾ ಪ್ರಶಸ್ತಿಯನ್ನು ನೀಡುತ್ತಿದೆ. 2020-21ನೇ ಸಾಲಿನಲ್ಲೂ ಸಂಘವು ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಗೆ ಪಾತ್ರವಾಗಿದ್ದು, ಡಿಸೆಂಬರ್ 14ರಂದು ನಡೆಯುವ ಬ್ಯಾಂಕಿನ ಮಹಾಸಭೆಯಲ್ಲಿ ಸಂಘವು ಪ್ರಶಸ್ತಿ ಸ್ವೀಕರಿಸಲಿದೆ ಎಂದು ಅವರು ತಿಳಿಸಿದರು.

ಸಂಘದ ನಿರ್ದೇಶಕ ವಿಶ್ವನಾಥ ಕೆ.ಟಿ. ಗೌರವ ಡಾಕ್ಟರೇಟ್ ಪದವಿ ಪಡೆದಿರುವ ಪ್ರಯುಕ್ತ ಅವರನ್ನು ಸನ್ಮಾನಿಸಲಾಯಿತು. ಎಸ್‌ಸಿಡಿಸಿಸಿ ಬ್ಯಾಂಕ್‌ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ರವೀಂದ್ರ ಬಿ, ಸಂಘದ ಉಪಾಧ್ಯಕ್ಷ ದಿವಾಕರ ಶೆಟ್ಟಿ, ನಿರ್ದೇಶಕರಾದ ಪುಷ್ಪರಾಜ್ ಎಂ.ಎಸ್. ರಾಘವ ಆರ್ . ಉಚ್ಚಿಲ್, ಶುಭಲಕ್ಷ್ಮಿ ವಿ. ರೈ, ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ., ವಿಶ್ವನಾಥ ಕೆ ಟಿ, ಶಿವಾನಂದ ಪಿ., ಗಿರಿಧರ್, ಅರುಣ್ ಕುಮಾರ್, ವಿಶ್ವನಾಥ್ ಅಮೀನ್, ಮೋಹನ್ ಎನ್., ಚಂದ್ರಕಲಾ, ಗೀತಾಕ್ಷಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT